ಸಿಬಿಎಸ್‌ಇ ಪರೀಕ್ಷೆ ರದ್ದು ಮಾಡಿ: ಶಿಕ್ಷಣ ಸಚಿವರಿಗೆ ಪ್ರಿಯಾಂಕಾ ಗಾಂಧಿ ಪತ್ರ
1 min readನವದೆಹಲಿ: ಸಿಬಿಎಸ್‌ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಪತ್ರ ಬರೆದಿದ್ದಾರೆ.
ಕೊರೋನಾ ರೋಗ ಉಲ್ಬಣವಾಗುತ್ತಿರುವ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆ ನಡೆಸಿದರೆ ತೊಂದರೆಗೊಳಗಾಗುವ ಸಾಧ್ಯತೆ ಇದೆ. ಪರೀಕ್ಷಾ ಕೇಂದ್ರದಲ್ಲಿ ಮಕ್ಕಳು ಸೇರುವುದರಿಂದ ಸೋಂಕಿಗೆ ಒಳಗಾಗುವ ತಾಣವಾಗಲಿದೆ. ಇದಕ್ಕೆ ಸರ್ಕಾರ ಮತ್ತು ಸಿಬಿಎಸ್‌ಇ ಮಂಡಳಿ ಜವಾಬ್ದಾರರಾಗಿರುತ್ತದೆ ಎಂದು ಹೇಳಿದ್ದಾರೆ.