ಚಾಮರಾಜನಗರ ಡಿಸಿ ಹೇಳಿಕೆಗೆ ತಿರುಗೇಟು ಕೊಟ್ಟ ಮೈಸೂರು ಡಿಸಿ ರೋಹಿಣಿ ಸಿಂಧೂರಿ..!

1 min read

ಮೈಸೂರು: ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಡಿಸಿ(ಮೈಸೂರು-ಚಾಮರಾಜನಗರ)ಗಳ ನಡುವೆ ಆರೋಪ ಪ್ರತ್ಯಾರೋಪದ ಸಮರ ನಡೆಯುತ್ತಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಪತ್ರಿಕಾ ಹೇಳಿಕೆಗೆ ತಿರುಗೇಟು ಕೊಟ್ಟು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆಯಾಗಿದೆ.

ಚಾಮರಾಜನಗರ ಡಿಸಿ ಎಂ.ಆರ್.ರವಿ ವಿರುದ್ದ ವಾಗ್ದಾಳಿ ನಡೆಸಿರುವ ರೋಹಿಣಿ ಸಿಂಧೂರಿ ಆಕ್ಸಿಜನ್ ಸಪ್ಲೈ ವಿಚಾರದಲ್ಲಿ ಚಾಮರಾಜನಗರ ಡಿಸಿ ಸುಳ್ಳು ಆರೋಪ ಮಾಡಿದ್ದಾರೆ. ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಮಾಧ್ಯಮಗಳಿಗೆ ಹೇಳಿಕೆ ನೀಡಿ ಆರೋಪ ಮಾಡಿದ್ದಾರೆ.

ಮೈಸೂರು ಡಿಸಿಯಾಗಿರುವ ನಾನು ಚಾಮರಾಜನಗರಕ್ಕಾಗಲಿ ಅಥವ ಇನ್ಯಾವುದೆ ಜಿಲ್ಲೆಗೆ ಆಕ್ಸಿಜನ್ ಸರಬರಾಜು ತಡೆದಿಲ್ಲ. ಯಾವುದೇ ಜಿಲ್ಲೆಗೆ ಆಕ್ಸಿಜನ್ ಸರಬರಾಜು ಅಲ್ಲಿನ ಸರಬರಾಜುದಾರರು ಹಾಗೂ ಜಿಲ್ಲಾಡಳಿತ ನಡುವಿನ ಸಂವಹನ ಇರುತ್ತೆ. ಈಗ ಮೈಸೂರಿಗೆ ಬಳ್ಳಾರಿಯಿಂದ ಕಡಿಮೆ ಆಕ್ಸಿಜನ್ ಸಪ್ಲೈ ಆದರೆ ನಾನು ಬಳ್ಳಾರಿ ಡಿಸಿಯನ್ನ ದೂಷಿಸಲು ಸಾಧ್ಯವಿಲ್ಲ. ತಮ್ಮ ಜಿಲ್ಲೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳೋದು ಅವರದ್ದೆ ಜವಬ್ದಾರಿ. ಅದು ಆಗದಿದ್ದರೆ ಮೇಲಧಿಕಾರಿಗಳಿಗೆ ಹೇಳಬೇಕು. ಅದರಲ್ಲಿ ವಿಫಲವಾಗಿರುವ ಚಾಮರಾಜನಗರದವರು ಈಗ ಮೈಸೂರಿನ ಮೇಲೆ ದೂಷಿಸುತ್ತಿದ್ದಾರೆ. ರಾಜ್ಯ ಸರ್ಕಾರ ಆದೇಶಿಸಿರುವ ವಿಚಾರಣೆಯಲ್ಲಿ ಇದೇಲ್ಲವು ಸಾಬೀತಾಗಲಿದೆ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿರಿಂದ ಪತ್ರಿಕಾ ಹೇಳಿಕೆ ಬಿಡುಗಡೆ.

ರೋಹಿಣಿ ಸಿಂಧೂರಿ ಅವರು 4 ಅಂಶಗಳನ್ನ ಉಲ್ಲೇಖಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಜೊತೆಗೆ ಮೇ 2 ಮತ್ತು 3 ರಂದು ಚಾಮರಾಜನಗರಕ್ಕೆ ಕಳುಹಿಸಿದ ಆಕ್ಸಿಜನ್ ದಾಖಲೆ ಬಹಿರಂಗಪಡಿಸಿದ್ದಾರೆ. ಆಕ್ಸಿಜನ್ ಕಳುಹಿಸಿದ ಸಮಯ ಹಾಗೂ ಬಿಲ್ ಸಂಖ್ಯೆಯ ಜೊತೆಗೆ ಮಾಹಿತಿ ಬಹಿರಂಗಗೊಳಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *