ಚಾಮರಾಜನಗರ ಆಕ್ಸಿಜನ್ ದುರಂತ: ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲು ಸರ್ಕಾರ ಸಮ್ಮತಿ
1 min readಚಾಮರಾಜನಗರ: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸರ್ಕಾರ ಸಮ್ಮತಿ ನೀಡಿದೆ.
ಮೃತಪಟ್ಟ 24 ಮಂದಿಯ ಪೈಕಿ 13 ಮಂದಿಯ ಕುಟುಂಬಕ್ಕೆ ಈಗಾಗಲೇ 2ಲಕ್ಷ ಪರಿಹಾರ ನೀಡಲಾಗಿದೆ. ಆದರೆ ಈ ಪರಿಹಾರದ ಮೊತ್ತ 2 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡಿ ಸದ್ಯ ಆದೇಶಿಸಲಾಗಿದೆ. ಈ ಬಗ್ಗೆ ಇಂದು ಹೈಕೋರ್ಟ್‌ಗೆ ಮಾಹಿತಿ ನೀಡಿದ ರಾಜ್ಯ ಸರಕಾರ, ಮುಖ್ಯ ನ್ಯಾಯಮೂರ್ತಿ ಎಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ ಮಾಹಿತಿ ನೀಡಿದರು.
-ಹೈಕೋರ್ಟ್ ಸೂಚನೆಯಂತೆ ಸದ್ಯ ಮಧ್ಯಂತರವಾಗಿ ನೀಡಲಾಗಿದ್ದ 2 ಲಕ್ಷ ರೂ.ಗಳ ಜೊತೆಗೆ 3 ಲಕ್ಷ ರೂ. ಸೇರಿಸಿ ಒಟ್ಟು 5 ಲಕ್ಷ ಪರಿಹಾರ ನೀಡಲು ಸರ್ಕಾರ ಆದೇಶಿಸಿದೆ ಎಂದರು.
-ಇನ್ನು ಉಳಿದ 11 ಮಂದಿ ಮೃತರು ಆಮ್ಲಜನ ಕೊರತೆಯಿಂದಲೇ ಸಾವನ್ನಪ್ಪಿದ್ದಾರೆಯೇ ಎಂಬ ಬಗ್ಗೆ ತಿಳಿಯಬೇಕಿದ್ದು, ಸದ್ಯ ಅವರ ಸಾವಿಗೆ ನಿಖರ ಕಾರಣ ತಿಳಿದಿಲ್ಲ. ಇದರಿಂದ ಪ್ರಕರಣದ ತನಿಖೆ ನಡೆಸುತ್ತಿರುವ ನ್ಯಾ.ಬಿ.ಎ.ಪಾಟಿಲ್ ಸಮಿತಿ ವರದಿ ನೀಡಿದ ನಂತರ 11 ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.