ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವುದು, ಒತ್ತಡ ಹಾಕುವುದು ಕಾನೂನು ಬಾಹಿರ
1 min readತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವುದು, ಒತ್ತಡ ಹಾಕುವುದು ಕಾನೂನುಬಾಹಿರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ದಾವಣಗೆರೆ: ಭ್ರಷ್ಟಾಚಾರ ಆರೋಪ ಪ್ರಕರಣದ ತನಿಖೆ ಮಾಡುವ ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವುದು, ಒತ್ತಡ ಹಾಕುವುದು ಕಾನೂನುಬಾಹಿರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ದಾವಣಗೆರೆಯಲ್ಲಿ ಇಂದು ಮಾಧ್ಯದವರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹಾಗೂ ಎಲ್ಲ ಕಡೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ಕಾನೂನುಬಾಹಿರ. 144 ಸೆಕ್ಷನ್ ಉಲ್ಲಂಘನೆಯನ್ನು ಮಾಡಲಾಗುತ್ತಿದೆ. ಇದು ಜವಾಬ್ದಾರಿಯುತ ರಾಷ್ಟ್ರೀಯ ಪಕ್ಷದ ಕೆಲಸ ಅಲ್ಲ. ಭ್ರಷ್ಟಾಚಾರದ ವಿರುದ್ಧ ನಾವೆಲ್ಲರೂ ಧ್ವನಿ ಎತ್ತುವ ಸಂದರ್ಭದಲ್ಲಿ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿಯೂ ವಿಚಾರಣೆ ಮಾಡಬಾರದು ಎನ್ನುವುದು ನ್ಯಾಯಸಮ್ಮತ ಅಲ್ಲ. ಇದು ಖಂಡಿತವಾಗಿಯೂ ಕಾಂಗ್ರೆಸ್ ಪಕ್ಷದ ಅವನತಿಗೆ ಕಾರಣವಾಗುತ್ತದೆ ಎಂದರು.