ಕರೋನಾ ಹೊಸ ತಳಿ ಆತಂಕ- ಮೈಸೂರು ಸೇರಿ ರಾಜ್ಯದಲ್ಲಿ ಹೈ ಅಲರ್ಟ್!

1 min read

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಿ.ಬಿ.ಎಂ.ಪಿ ಸೇರಿದಂತೆ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ,ಚಾಮರಾಜನಗರ , ಕೊಡಗು, ಮೈಸೂರು ಸೇರಿ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.

ಸಚಿವರಾದ ಆರ್.ಅಶೋಕ್, ಡಾ:ಸಿ.ಎನ್.ಅಶ್ವತ್ಥ್ ನಾರಾಯಣ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರೋಗ್ಯ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆಯುಕ್ತ ರಂದೀಪ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು.

ಹೊಸ ಮಾರ್ಗಸೂಚಿ ರಿಲೀಸ್! ಆರೋಗ್ಯ ಇಲಾಖೆಯಿಂದ ಪ್ರತ್ಯೇಕವಾಗಿ ಹೊರಡಿಸಲಾಗುತ್ತೆ.

ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.

  • ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು.
  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್.
  • ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.

*16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು.

*ಹಾಸ್ಟೆಲ್‌ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು.

ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.

*ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.

About Author

Leave a Reply

Your email address will not be published. Required fields are marked *