ಬೆಂಗಳೂರಲ್ಲಿ ಆಸ್ಟ್ರೇಲಿಯನ್‌ ಕಾನ್ಸುಲೇಟ್‌ ಕಚೇರಿ!

1 min read

ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್‌ ಕಾನ್ಸುಲೇಟ್‌ ಕಚೇರಿ ಶೀಘ್ರ ಪ್ರಾರಂಭ

ಬೆಂಗಳೂರು : ಭಾರತದಲ್ಲಿ ಆಸ್ಟ್ರೇಲಿಯಾದ ಕಾನ್ಸಲ್‌ ಜನರಲ್‌ ಬ್ಯಾರಿ ಓʼ ಫ್ಯಾರೆಲ್‌ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ, ಶಿಕ್ಷಣ ಮತ್ತಿತರ ಕ್ಷೇತ್ರಗಳಲ್ಲಿ ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಂಧವ್ಯವನ್ನು ಬಲಪಡಿಸಲು ನಿರ್ಧರಿಸಲಾಯಿತು.

ದೇಶದಲ್ಲಿ ಅತ್ಯಂತ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ತಂತ್ರಜ್ಞಾನ ಹಾಗೂ ಶಿಕ್ಷಣ ಕ್ಷೇತ್ರದಲ್ಲಿಯೂ ಮುನ್ನಡೆ ಸಾಧಿಸಿದೆ. ಆಸ್ಟ್ರೇಲಿಯಾದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಹೊಂದಲು ರಾಜ್ಯ ಉತ್ಸುಕವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್‌ ಕಾನ್ಸುಲೇಟ್‌ ಕಚೇರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗುತ್ತಿರುವ ಕುರಿತು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದರು.
ದಕ್ಷಿಣ ಭಾರತದ ಆಸ್ಟ್ರೇಲಿಯನ್ ಕಾನ್ಸಲ್ ಜನರಲ್ ಸಾರಾ ಕಿರ್ಲೆವ್, ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಆಸ್ಟ್ರೇಲಿಯನ್ ಕಾನ್ಸುಲೆಟ್ ಜನರಲ್ ನ ನಿಯೋಜಿತ ಡೆಪ್ಯುಟಿ ಕಾನ್ಸಲ್ ಜನರಲ್ ಹ್ಯುಂಗ್ – ಮಿನ್ ಕಿಮ್, ರಾಜ್ಯದ ಐಟಿ ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು

About Author

Leave a Reply

Your email address will not be published. Required fields are marked *