ರಾಜ್ಯದಲ್ಲಿ ನಾಳೆಯಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರ್ಣ ಶಾಲೆಗಳು ಆರಂಭ.!

1 min read

ಬೆಂಗಳೂರು : ರಾಜ್ಯದಲ್ಲಿ ನ. 2 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರಾಥಮಿಕ ಶಾಲೆಗಳು ಪೂರ್ಣ ಅವಧಿ ತರಗತಿಗಳು ಆರಂಭವಾಗಲಿವೆ. ರಾಜ್ಯ ಸರ್ಕಾರವು ಅ.25 ರಿಂದ 1 ರಿಂದ 5 ನೇ ತರಗತಿಗಳನ್ನು ಆರಂಭಿಸಿತ್ತು. ಆದರೆ ಅರ್ಧ ದಿನ ಮಾತ್ರ ತರಗತಿಗಳು ನಡೆಸಲು ಸೂಚಿಸಿತ್ತು.

ಸದ್ಯ ನವೆಂಬರ್ 2 ರ ಮಂಗಳವಾರದಿಂದ ಪ್ರಾಥಮಿಕ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿವೆ. ಇದಕ್ಕೆ ಸಕಲ ಸಿದ್ಧತೆಯನ್ನು ಶಿಕ್ಷಣ ಇಲಾಖೆ ಮಾಡಿಕೊಂಡಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅ.25 ರಿಂದ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿತ್ತು. ಇದೀಗ ನವೆಂಬರ್ 2 ರಂದು ಪೂರ್ಣ ತರಗತಿಗಳು ಆರಂಭವಾಗಲಿವೆ ಎಂದು ಮಾಹಿತಿ ಲಭ್ಯವಾಗಿದೆ.

About Author

Leave a Reply

Your email address will not be published. Required fields are marked *