ಕಾಂಗ್ರೆಸ್ ಪಾದಯಾತ್ರೆಗೆ ಬ್ರೇಕ್!
1 min readಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಕಾಂಗ್ರೆಸ್ ಮುಖಂಡರು ನಿರ್ಧಾರ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನವಾಗಿದೆ. ರಾಮನಗರದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದು ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಕೇವಲ ಐದನೇ ದಿನಕ್ಕೆ ಪಾದಯಾತ್ರೆ ತಾತ್ಕಾಲಿಕ ಸ್ಥಗಿತಗೊಂಡಿದೆ.
ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ, ಎಸ್.ಎಂ.ಕೃಷ್ಣ ಸೇರಿದಂತೆ ಹಲವರು ಈ ಬಗ್ಗೆ ಮನವಿ ಮಾಡಿದ್ದರು. ಅಲ್ಲದೆ ಇಂದಿನಿಂದ ಪಾದಯಾತ್ರೆ ಕೈಗೊಂಡರೆ ಕಾನೂನು ಕ್ರಮಕ್ಕು ಸರ್ಕಾರ ಸೂಚಿಸಿತ್ತು. ಈಗಾಗಲೇ 3 ಸಾವಿರ ಪೊಲೀಸ್ ಸಿಬ್ಬಂದಿಗಳನ್ನ ಸ್ಥಳದಲ್ಲಿ ಭದ್ರತೆಗಾಗಿ ನಿಯೋಜನೆ ಮಾಡಲಾಗಿತ್ತು. ಆದರೆ ಈಗ ಕಾಂಗ್ರೆಸ್ ಸಭೆಯಲ್ಲೇ ಈ ತೀರ್ಮಾನ ಬಂದಿದ್ದು ಕೈ ಹೈಕಮಾಂಡ್ ಕೂಡ ಈ ಬಗ್ಗೆ ಸೂಚಿಸಿದ ಕಾರಣ ಪಾದಯಾತ್ರೆ ಮೊಟಕುಗೊಳಿಸಲಾಗಿದೆ.