ಮೈಸೂರಿನಲ್ಲಿ ಲೋನ್‌ಗೆ ಸಿಗುತ್ತೆ ಪೆಟ್ರೋಲ್! NSUI ಅಣಕ ಪ್ರದರ್ಶನ!
1 min readಮೈಸೂರಿನಲ್ಲಿ ಬಿಜೆಪಿ ವಿರುದ್ಧ ಸರಣಿ ಪ್ರತಿಭಟನೆ ನಡೆಯುತ್ತಿದ್ದು ಗ್ಯಾಸ್ ಪೆಟ್ರೋಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ. ಮೈಸೂರಿನ ರೈಲು ನಿಲ್ದಾಣದ ಸಮೀಪ ಪೆಟ್ರೋಲ್ ಬಂಕ್ ಬಳಿ ಪೆಟ್ರೋಲ್ ಗೆ ಲೋನ್ ಕೊಡುವುದಾಗಿ ಹೇಳಿ ವ್ಯಂಗ್ಯವಾಗಿ ಅಣಕ ಪ್ರದರ್ಶನ ಮಾಡಲಾಯಿತು. ಬಳಿಕ ಬಿಜೆಪಿ ವಿರುದ್ದ ಕಿಡಿಕಾರಿದ ಎನ್‌ಎಸ್‌ಯುಐ ಕಾರ್ಯಕರ್ತರು ಘೋಷಣೆ ಕೂಗಿದ್ರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಕಾರ್ಯಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಆಕ್ರೋಶ ಹೊರಹಾಕಲಾಯಿತು.
ಇತ್ತ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಬಳಿಯು ಮಹಿಳಾ ಕಾಂಗ್ರೆಸ್ ವತಿಯಿಂದ ಗ್ಯಾಸ್ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು. ಸೌದೆಯಲ್ಲಿ ಟೀ ಮಾಡುವ ಮೂಲಕ ಗ್ಯಾಸ್ ದರ ಏರಿಕೆ ಖಂಡಿಸಿ ಆಕ್ರೋಶ ಹೊರಹಾಕಿದ್ರು. ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳ ಮಾನಸ ಕೂಡ ಬಿಜೆಪಿ ವಿರುದ್ಧ ಕಿಡಿಕಾರಿದರು.