ಮುಂದಿನ ವಿಧಾನಸಭೆ ಚುನಾವಣೆಗೆ ಮುಂಚೆನೇ ಕಾಂಗ್ರೆಸ್ ಎರಡು ಹೋಳಾಗುತ್ತೆ: ಸಚಿವ ಕೆ.ಎಸ್.ಈಶ್ವರಪ್ಪ

1 min read

ಮೈಸೂರು,ಅ.3-ಮುಂದಿನ ವಿಧಾನಸಭೆ ಚುನಾವಣೆಗೆ ಮುಂಚೆನೇ ಕಾಂಗ್ರೆಸ್ ಎರಡು ಹೊಳಾಗುತ್ತೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಎರಡು ಹೊಳಾಗುತ್ತದೆ. ಇದಕ್ಕೆ ಇನ್ನು ಒಂದೂವರೆ ವರ್ಷ ಕಾಯುವ ಅವಶ್ಯಕತೆ ಇಲ್ಲ ಎಂದರು.
ಡಿ.ಕೆ. ಶಿವಕುಮಾರ್ ‌ಗೂ ಅಧಿಕಾರ ಬೇಕು. ಸಿದ್ದರಾಮಯ್ಯರಿಗೂ ಅಧಿಕಾರ ಬೇಕು. ಇದರಿಂದ ಕಾಂಗ್ರೆಸ್ ಎರಡೂ ಹೋಳಾಗುತ್ತೆ ಎಂದು ಹೇಳಿದರು.
ಮುಂದಿನ ಚುನಾವಣೆ ಅತಂತ್ರ ಮಾಡುವುದು ಜೆಡಿಎಸ್ ಉದ್ದೇಶ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರ ಉದ್ದೇಶವನ್ನು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಕಷ್ಟ ನೋವನ್ನು ಹೇಳಿಕೊಂಡಿದ್ದಾರೆ. ಅತಂತ್ರ ಸ್ಥಿತಿಯಾದರೆ ಯಾವುದಾರೂ ಪಕ್ಷದ ಜೊತೆ ಸೇರಿಕೊಳ್ತಾರೆ. ಸೇರಿಕೊಂಡು ಆಡಳಿತ ಮಾಡಬಹುದು ಅನ್ನೋ ಭ್ರಮೆಯಲ್ಲಿದ್ದಾರೆ. ಅತಂತ್ರ ಅನ್ನೋ ಭಾವನೆ ಕುಮಾರಸ್ವಾಮಿ ಅವರಲ್ಲಿ ಇರಬಹುದು. ಅವರ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು.
ಕೆಲವರಿಗೆ ಎಂಎಲ್ಎ ಸೀಟ್ ಸಿಗಲಿಲ್ಲ ಅನ್ನೋ ಹುಚ್ಚು. ಸಿದ್ದರಾಮಯ್ಯರಿಗೆ ಹುಚ್ಚು ಕನಸು. ಮುಖ್ಯಮಂತ್ರಿಯಾಗಿರಲಿ, ಮುಂಬರುವ ಚುನಾವಣೆಯಲ್ಲಿ ಗೆಲ್ಲಲಿ. ಕಳೆದ ಚುನಾವಣೆಯಲ್ಲಿ ಜನ ಯಾಕ್ ಕೈ ಬಿಟ್ರು ನಿಮ್ಮನ್ನ? ಚಾಮುಂಡೇಶ್ವರಿಲಿ ಯಾಕ್ ಸೋತ್ರಿ? ಎಂದು ಪ್ರಶ್ನಿಸಿದರು.
ಜಾತಿಗಣತಿ ಗಣತಿ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಸಂಘಟನೆ ಮಾಡಲು ಅಡ್ಡ ದಾರಿ ತುಳಿದಿದ್ದಾರೆ. ಸದನದಲ್ಲಿ ಜಾತಿಗಣತಿ ಬಗ್ಗೆ ಯಾಕ್ ಮಾತಾಡ್ಲಿಲ್ಲ?
ಸಿದ್ದರಾಮಯ್ಯನವರೇನು ಬಾಯಲ್ಲಿ ಕಡುಬು ಇಟ್ಟುಕೊಂಡಿದ್ರಾ?
ಸದನದಲ್ಲಿ ಜಾತಿಗಣತಿಯ ಧ್ವನಿ ಮಾಡ್ತೀವಿ ಅಂದ್ರಿ ಮಾಡಿದ್ರಾ?
ಯಾಕ್ ಜಾತಿಗಣತಿ ಬಗ್ಗೆ ಮಾತಡಲಿಲ್ಲ. ಹಿಂದುಳಿದಿರುವ, ಅಲ್ಪಸಂಖ್ಯಾತರು ನಿಮಗೆ ಹೆಸರಿಗೆ ಮಾತ್ರನಾ‌? ಮೈತ್ರಿ ಸರ್ಕಾರದ ಸಂದರ್ಭದಲ್ಲಿ ಜಾತಿಗಣತಿ ವರದಿ ಸಿದ್ದವಾಗಿದ್ದರೂ ಕುಮಾರಸ್ವಾಮಿ ಮಂಡಿಸಲಿಲಿಲ್ಲ. ಆಗ ನಿಮ್ಮ ಬೆಂಬಲ ವಾಪಸ್ ತಗೋಬೇಕಿತ್ತು.
ಯಾಕೆ ತಗೆದುಕೊಳ್ಳಲಿಲ್ಲ? ಎಂದು‌ ಸಿದ್ದರಾಮಯ್ಯಗೆ ಪ್ರಶ್ನೆ ಮಾಡಿದ ಈಶ್ವರಪ್ಪ ಇವರಿಗೆ ಯಾವುದು ಬೇಕಾಗಿಲ್ಲ, ಅಧಿಕಾರವೊಂದೆ ಇವರ ಗುರಿ ಎಂದು ಕಿಡಿಕಾರಿದರು.

About Author

Leave a Reply

Your email address will not be published. Required fields are marked *