ಮೈಸೂರಿನಲ್ಲಿ ಇಂದಿನಿಂದ ಬಸ್ ಸಂಚಾರ ಆರಂಭ: ಪ್ರಯಾಣಿಕರಿಗೆ ಮಾಸ್ಕ್, ಗುಲಾಬಿ ನೀಡಿ ಕೊರೊನಾ ಜಾಗೃತಿ
1 min readಮೈಸೂರು: ಲಾಕ್ ಡೌನ್ ನಿರ್ಬಂಧವನ್ನು ಸಡಿಲಿಸಿದ್ದರಿಂದಾಗಿ ಇಂದಿನಿಂದ ಮೈಸೂರು ನಗರ ಹಾಗೂ ಗ್ರಾಮಾಂತರ ವಿಭಾಗದ ಬಸ್ ಗಳ ಸಂಚಾರ ಪುನರಾರಂಭ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಉಚಿತವಾಗಿ ಮಾಸ್ಕ್, ಗುಲಾಬಿ ನೀಡಿ ಕೊರೊನಾ ಜಾಗೃತಿ ಮೂಡಿಸಲಾಗಿದೆ.
ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದ ಸಬರ್ಬ್ ಬಸ್ ಸ್ಟ್ಯಾಂಡ್ ನಲ್ಲಿ ಪ್ರಯಾಣಿಕರಿಗೆ ಉಚಿತವಾಗಿ 1000 ಮಾಸ್ಕ್ ಮತ್ತು ಗುಲಾಬಿ ನೀಡಿ ದಯಮಾಡಿ ಸರ್ಕಾರದ ನಿಯಮಗಳನ್ನು ಪಾಲನೆ ಮಾಡಿ ಕಡ್ಡಾಯವಾಗಿ ಲಸಿಕೆ ಪಡೆಯಿರಿ ಎಂದು ಮನವಿ ಮಾಡಿದೆ.
ಕೊರೊನಾದಿಂದ ದೂರವಿರಿ, ಅಂತರ್ ಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ ಸಂಚರಿಸಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂಬ ಸಂದೇಶದೊಂದಿಗೆ ಜಾಗೃತಿ ಮೂಡಿಸಿದರು ಕೋವಿಡ್–19 ವೈರಾಣು ಹರಡುವುದನ್ನು ತಡೆಯಲು ಪ್ರತಿಯೊಬ್ಬರೂ ಎಚ್ಚರ ವಹಿಸಿ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಾಗೃತಿ ಮೂಡಿಸಲಾಯಿತು.
ಇದೇ ಸಂದರ್ಭದಲ್ಲಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್ ,ಬಿಜೆಪಿ ನಗರ ಯುವ ಮೋರ್ಚಾ ಉಪಾಧ್ಯಕ್ಷ ಕಾರ್ತಿಕ್ ಮರಿಯಪ್ಪ ,ದುರ್ಗಾಪ್ರಸಾದ್ ,ಎಸ್ ಎನ್ ರಾಜೇಶ್ ,ಜಿ ರಾಘವೇಂದ್ರ ಹಾಗೂ ಇನ್ನಿತರರು ಹಾಜರಿದ್ದರು.