ಕೊರೊನಾ ಮೂರನೇ ಅಲೆ ಪ್ರಾರಂಭವಾಯಿತಾ..? ಮೈಸೂರು ಜಿಲ್ಲೆಯಲ್ಲಿ ಮಕ್ಕಳಲ್ಲಿ ಹೆಚ್ಚಾದ ಸೋಂಕು!
1 min readಮೈಸೂರು: ಮೈಸೂರಿನಲ್ಲಿ ಕೊರೊನಾ ಮೂರನೇ ಅಲೆ ಪ್ರಾರಂಭವಾಯಿತಾ ಎಂಬ ಪ್ರಶ್ನೆ ಮೂಡುತ್ತಿದ್ದು ಜಿಲ್ಲೆಯಲ್ಲಿ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ.
ಹೌದು ಕಳೆದ 10 ದಿನದಲ್ಲಿ ಮೈಸೂರು ಜಿಲ್ಲೆಯಲ್ಲಿ 700 ಕ್ಕು ಹೆಚ್ಚು ಮಕ್ಕಳಲ್ಲಿ ಸೋಂಕು ಪತ್ತೆಯಾಗಿರುವುದು ಜಿಲ್ಲಾಡಳಿತ ನೀಡಿರುವ ಅಧಿಕೃತ ಸೋಂಕಿತರ ವರದಿಯಲ್ಲಿ ಬಹಿರಂಗವಾಗಿದೆ. 18 ವರ್ಷದೊಳಗಿನ ಮಕ್ಕಳಲ್ಲಿ ಸೋಂಕು ಪತ್ತೆಯಾಗುತ್ತಿದೆ.
ಮೊದಲ ಅಲೆಯಲ್ಲಿ 1500ಕ್ಕು ಹೆಚ್ಚು ಮಕ್ಕಳಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗಾ ಕಳೆದ ಮೂರು ತಿಂಗಳಲ್ಲಿ 3 ಸಾವಿರ ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ ಕಳೆದ 10 ದಿನದಲ್ಲಿ ಸೋಂಕು ಹೆಚ್ಚಾಗಿ ಕಂಡು ಬಂದಿದ್ದು, 769 ಪ್ರಕರಣ ಪತ್ತೆಯಾಗಿದೆ. ಸದ್ಯಕ್ಕೆ ದೊಡ್ಡ ಮಟ್ಟದ ಸಮಸ್ಯೆ ಕಂಡು ಬಂದಿಲ್ಲ. ಅಸಿಮ್ಟಮ್ಯಾಟಿಕ್ ಲಕ್ಷಣಗಳು ಕಂಡು ಬರುತ್ತಿದೆ. ಮುಂದೆ ಈ ಸಂಖ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ.