ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ ಶರಣಾದ ಕೊರೋನಾ ಸೋಂಕಿತ

1 min read

ಮೈಸೂರು: ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲೇ ನೇಣಿಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಟ್ರಾಮ ಕೇರ್ ಸೆಂಟರ್ ನಲ್ಲಿ ಘಟನೆ ನಡೆದಿದ್ದು ಆಕ್ಸಿಜನ್ ವಯರ್ ನಿಂದಲೇ ಸೋಂಕಿತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೋಂಕಿತ ದೇವರಾಜ ಎಂಬುವವರು ಇಂದು ಬೆಳಿಗ್ಗೆ 9 ಗಂಟೆ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೈಸೂರಿನ ತನ್ವಿರ್ ಸೇಠ್ ನಗರದ ನಿವಾಸಿಯಾಗಿರುವ ದೇವರಾಜ ಎರಡು ದಿನಗಳ ಹಿಂದೆ ಕೋವಿಡ್ ಸೊಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಆಕ್ಸಿಜನ್ ಪಡೆಯುತ್ತಿದ್ದ ಪೈಪ್ ನಿಂದ ಶೌಚಾಲಯದ ಕಿಟಕಿಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *