ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೊನಾ ಪಾಸಿಟಿವ್..!
1 min readಉಡುಪಿ: ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇನ್ನು ಕೋವಿಡ್ ಲಸಿಕೆ ಹಾಕಿಸಿಕೊಂಡ 13 ದಿನಗಳ ಬಳಿಕ ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೋನಾ ಪಾಸಿಟಿವ್ ಬಂದಿದೆ.
ಕೊರೊನಾ ದೃಢಪಟ್ಟ ಬಗ್ಗೆ ಸ್ವತಃ ಶ್ರೀನಿವಾಸ ಪೂಜಾರಿಯವರೇ ಟ್ವೀಟ್ ಮಾಡಿ ಕೋವಿಡ್ ಪಾಸಿಟೀವ್ ಬಂದ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು Covid-19 ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮಾಹಿತಿ ನೀಡಿದ್ದಾರೆ.