ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹಗೆ ಕೊರೊನಾ ಪಾಸಿಟಿವ್
1 min readಮೈಸೂರು: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು ‘ಆತ್ಮೀಯರೆ.. ಶಾಂತವೇರಿ ಗೋಪಾಲ ಗೌಡ ಆಸ್ಪತ್ರೆಗೆ ಬೆಳಿಗ್ಗೆ ರೋಗಿಯೊಬ್ಬರ ಭೇಟಿಗೆ ತೆರಳಿದ್ದೆ. ಅಲ್ಲಿ ರ್‍ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಒಳಪಟ್ಟಾಗ ವರದಿ ನೆಗೆಟಿವ್ ಬಂದಿತ್ತು. ಬಳಿಕ ಆರ್‌ಟಿಪಿಸಿಆರ್ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ನನಗೆ ಯಾವುದೇ ರೋಗ ಲಕ್ಷಣಗಳಿಲ್ಲ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಪ್ರತ್ಯೇಕವಾಗಿರಿ, ಕ್ಷಮಿಸಿ’ ಎಂದು ತಿಳಿಸಿದ್ದಾರೆ.