ನರೇಗಾ ಕಾಮಗಾರಿ ಸ್ಥಳದಲ್ಲಿಯೇ ಕೂಲಿಕಾರ್ಮಿಕರಿಗೆ ವ್ಯಾಕ್ಸಿನ್‌

1 min read

ಮೈಸೂರು: ಕೆ.ಆರ್.ನಗರ ತಾಲೂಕಿನ ನರನಚನಹಳ್ಳಿ ಗ್ರಾಪಂ ವ್ಯಾಪ್ತಿಯ ಹನುಮನಹಳ್ಳಿ ಗ್ರಾಮದ ಕೆರೆ ಕಾಮಗಾರಿ ಸ್ಥಳದಲ್ಲಿ ಕೂಲಿಕಾರ್ಮಿಕರಿಗೆ ಕೊರೊನಾ ವ್ಯಾಕ್ಸಿನ್‌ ನೀಡಲಾಯಿತು.

ತಾಲ್ಲೂಕು ಪಂಚಾಯತ್‌ ವತಿಯಿಂದ ಕೂಲಿಕಾರ್ಮಿಕರಿಗೆ ಕೋವಿಡ್‌ ಕುರಿತು ಜಾಗೃತಿ ಮೂಡಿಸುವ ಹಾಗೂ ವ್ಯಾಕ್ಸಿನ್‌ ನೀಡುವ ಉದ್ದೇಶದಿಂದ ತಾಲೂಕಿನ ಹನುಮನಹಳ್ಳಿ ಗ್ರಾಮದ ಕೆರೆ ಕಾಮಗಾರಿ ಸ್ಥಳದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು ೪೦ ಕಾರ್ಮಿಕರಿಗೆ ಕೊರೊನಾ ಪರೀಕ್ಷೆ ಮಾಡಿ, ವ್ಯಾಕ್ಸಿನ್‌ ನೀಡಲಾಯಿತು.

ಈ ಸಂದರ್ಭ ತಹಸೀಲ್ದಾರ್‌ ಸಂತೋಷ್ ಮಾತನಾಡಿ, ಕೊರೊನಾ ಮಹಾಮಾರಿಯಿಂದ ಪಾರಾಗುವುದಕ್ಕೆ ಜಾಗೃತಿಯಷ್ಟೇ ವ್ಯಾಕ್ಸಿನ್‌ ಅಗತ್ಯವಾಗಿದೆ. ಹೀಗಾಗಿ, ಪ್ರತಿಯೊಬ್ಬರು ವ್ಯಾಕ್ಸಿನ್‌ ಹಾಕಿಸಿಕೊಳ್ಳಬೇಕು. ವ್ಯಾಕ್ಸಿನ್‌ ಹಾಕಿಸಿಕೊಳ್ಳುವುದಕ್ಕೆ ಯಾವುದೇ ರೀತಿಯ ಭಯ ಬೇಡ ಎಂದು ಹೇಳಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಮಹೇಂದ್ರಪ್ಪ ಮಾತನಾಡಿ, ಪ್ರತಿಯೊಬ್ಬರು ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಸರಕಾರ ಸೂಚಿಸಿದೆ. ೧೮ ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆಯನ್ನು ಪಡೆದುಕೊಳ್ಳಬೇಕು. ಕೆ.ಆರ್.ನಗರ ತಾಲ್ಲೂಕು ವ್ಯಾಕ್ಸಿನ್‌ ನೀಡುವಿಕೆಯಲ್ಲಿ ಮಾದರಿಯಾಗಿದೆ ಎಂದರು.

ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ರಘುನಾಥ್ ಮಾತನಾಡಿ, ಜನರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಸರ್ಕಾರದ ಸೂಚನೆಯಂತೆ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್‌ ನೀಡಲಾಗುತ್ತಿದೆ. ವ್ಯಾಕ್ಸಿನ್‌ ಪಡೆಯುವುದರಿಂದ ಯಾರು ವಂಚಿತರಾಗಬಾರದು ಎಂಬ ಉದ್ದೇಶದಿಂದ ಇಂದು ಕಾಮಗಾರಿ ಸ್ಥಳದಲ್ಲಿಯೇ ವ್ಯಾಕ್ಸಿನ್‌ ನೀಡುವ ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದು ಹೇಳಿದರು.

ಇದಕ್ಕೂ ಮುನ್ನಾ ನರೇಗಾ ಯೋಜನೆ ಕುರಿತಂತೆ ಕೂಲಿಕಾರ್ಮಿಕರಿಗೆ ಮಾಹಿತಿಯನ್ನು ಒದಗಿಸಿದರು. ಕೆರೆ ಕಾಮಗಾರಿಯನ್ನು ಪರಿಶೀಲಿಸಿ, ಮೆಚ್ಚುಗೆವ್ಯಕ್ತಪಡಿಸಿದರು.

ಈ ಸಂದರ್ಭ ತಾಲ್ಲೂಕು ಸಹಾಯಕ ನಿರ್ದೇಶಕ ಭಾಸ್ಕರ್‌, ಟಿಸಿ ಭರತ್‌, ಟಿಐಇಸಿ ರವಿಕುಮಾರ್‌, ಟಿಎಇ ಶಿವಕುಮಾರ್‌, ಪಿಡಿಒ ಗೋವಿಂದರಾಜು, ಗ್ರಾಪಂ ಅಧ್ಯಕ್ಷ ಮಂಜುನಾಥ್‌, ಉಪಾಧ್ಯಕ್ಷರಾದ ನಾಗಮಣಿ, ಬಿ ಎಫ್‌ ಟಿಗಳಾದ ಪವಿತ್ರ, ವಿ.ರಘು, ಎಂ.ಕೆ.ವೆಂಕಟರಾಜು ಇತರರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *