ಮೈಸೂರು ಜಿಲ್ಲೆಯಲ್ಲಿ 1 ಲಕ್ಷ ದಾಟಿದ ಕೊರೊನಾ ಸೋಂಕಿನ ಪಾಸಿಟಿವ್ ಪ್ರಕರಣಗಳು
1 min readಮೈಸೂರು: ಮೈಸೂರಿನಲ್ಲಿಂದು 1,537 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವ್ ಪ್ರಕರಣಗಳು 1 ಲಕ್ಷ (1,00,284)ದಾಟಿದೆ.
ಇನ್ನು ಇಂದು ಒಂದೇ ದಿನ 2,706 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸತತ 4ನೇ ದಿನವು ಕೂಡ ಕೊರೊನಾ ಪಾಸಿಟಿವ್ ಹೊಂದಿದವರಿಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮೈಸೂರಿನಲ್ಲಿ ಇದುವರೆಗೂ 84,525 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 14,425ಕ್ಕೆ ಇಳಿಕೆಯಾಗಿದೆ.
ಇಂದು 07 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ಮೈಸೂರಿನಲ್ಲಿ ಇದುವರೆಗೆ 1,334 ಕೊರೊನಾ ಸೋಂಕಿತರು ಸಾವಿಗೀಡಾಗಿದ್ದಾರೆ.