ಮೈಸೂರಿನಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಮರೆತರೆ ಕ್ರಿಮಿನಲ್ ಕೇಸ್
1 min readಮೈಸೂರು: ಮೈಸೂರಿನಲ್ಲಿ ಸಾಮಾಜಿಕ ಅಂತರ ಮಾಸ್ಕ್ ಮರೆತರೆ ಕ್ರಿಮಿನಲ್ ಕೇಸ್ ಹಾಕಲಾಗುತ್ತಿದೆ. ಮೈಸೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.
ಮೈಸೂರು ನಗರ ಪೊಲೀಸ್ ಆಯುಕ್ತರಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದ್ದಾರೆ. ಈಗಾಲೇ ನಿಯಮ ಉಲ್ಲಂಘಿಸಿದ 7 ಜನರ ಮೇಲೆ ಕ್ರಿಮಿನಲ್ ಕೇಸ್ ಹಾಕಲಾಗಿದೆ. ಬೇಕರಿ, ಟೀ ಸ್ಟಾಲ್, ಪ್ರಾವಿಜನ್ ಸ್ಟೋರ್ ಮಾಲೀಕರ ಮೇಲೆ ಕೇಸ್ ದಾಖಲು ಮಾಡಲಾಗಿದೆ.
ವಿಪತ್ತುಗಳ ನಿರ್ವಹಣಾ ಕಾಯ್ದೆ 2005ರ ಅನ್ವಯ ಕೇಸ್ ಹಾಕಲಾಗಿದ್ದುಮ, ವ್ಯವಹಾರದ ವೇಳೆ ಜನರ ಗುಂಪು ಸೇರಿಸಿಕೊಂಡಿದ್ದು. ಮಾಸ್ಕ್ ಧರಿಸದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದದ್ದು. ಕೊರೊನಾ ನಿಯಮ ಉಲ್ಲಂಘಿಸಿದ್ದಕ್ಕೆ ಪ್ರಕರಣ ದಾಖಲಿಸಲು ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ.