ರೆಡಿ ಆಯ್ತು ಡಾಲಿ ಧನ್ಯತಾ ಮದುವೆ ಆಮಂತ್ರಣ ಪತ್ರಿಕೆ: ಸಿಎಂಗೆ ಮೊದಲ ಇನ್ವಿಟೇಷನ್
1 min readಸಿನಿಮಾ: ನಟ ಡಾಲಿ ಧನಂಜಯ ಹಾಗೂ ಧನ್ಯತಾ ನಿಶ್ಚಿತಾರ್ಥ ಇತ್ತೀಚಿಗಷ್ಟೇ ಸಖತ್‌ಸಿಂಪಲ್‌ಆಗಿ ನೆರವೇರಿತ್ತು. ನಿಶ್ಚಿತಾರ್ಥದ ನಂತರ ಮದುವೆ ಸಿದ್ದತೆಗಳನ್ನು ಮಾಡಿಕೊಳ್ತಿರೋ ಡಾಲಿ ಮತ್ತು ಧನ್ಯತಾ ಇಂದು ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯ ಪೂಜೆ ಮಾಡಿಸುವ ಮೂಲಕ ಇಂದಿನಿಂದ ಮದುವೆ ಎಲ್ಲಾ ಕೆಲಸ ಕಾರ್ಯಗಳನ್ನ ಶುರು ಮಾಡಿದ್ದಾರೆ. ಡಾಲಿ ಧನಂಜಯ ಅವರು ಯಾವುದೇ ಸಿನಿಮಾ ಕೆಲಸಗಳನ್ನ ಶುರು ಮಾಡುವ ಮೊದಲು ಬಂಡೆ ಮಹಾಕಾಳಿ ದೇವಿಯ ಆಶೀರ್ವಾದ ಪಡೆದು ಶುರು ಮಾಡುತ್ತಾರೆ, ಅದರಂತೆಯೇ ತಮ್ಮ ಮದುವೆ ಕಾರ್ಯ ಶುರು ಮಾಡುವ ಮೊದಲು ತಮ್ಮ ಭಾವಿ ಪತ್ನಿ ಧನ್ಯತಾ ಅವರ ಜೊತೆ ದೇವಸ್ಥಾನಕ್ಕೆ ಬೇಟಿಕೊಟ್ಟು ಮದುವೆ ಆಮಂತ್ರಣ ಪತ್ರಿಕೆಗೆ ಪೂಜೆ ಮಾಡಿಸಿಕೊಂಡು ದೇವಿಯ ಆಶೀರ್ವಾದ ಪಡೆದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ತಮ್ಮ ಮದುವೆ ಆಮಂತ್ರಣ ಪತ್ರಿಕೆ ವಿಭಿನ್ನವಾಗಿ ಡಿಸೈನ್ ಮಾಡಿಸಬೇಕು ಅನ್ನೋ ಆಲೋಚನೆಯಲ್ಲಿ ಇರುತ್ತಾರೆ, ಇನ್ನು ಸಿನಿಮಾ ಸ್ಟಾರ್ ಗಳು ಸದಾ ಕ್ರಿಯೆಟಿವ್ ಆಗಿಯೇ ಯೋಚನೆ ಮಾಡುತ್ತಾರೆ, ಅದರಂತೆಯೇ ಡಾಲಿ ತಮ್ಮ ಮದುವೆ ಇನ್ವಿಟೇಷನ್ ಅನ್ನು ಸಖತ್ತಾಗಿ ಪ್ಲಾನ್ ಮಾಡಿದ್ದಾರೆ. ಓಲ್ಡ್ ಇಸ್ ಗೋಲ್ಡ್ ಅನ್ನೋ ರೀತಿಯಲ್ಲಿ ಅಂದರೆ ಅಂಚೆ ಪತ್ರದಲ್ಲಿ ತಮ್ಮ ಮದುವೆ ಆಮಂತ್ರಣವನ್ನು ತಾವೇ ಖುದ್ದಾಗಿ ಬರೆದು ಪ್ರಿಂಟ್ ಮಾಡಿಸಿದ್ದಾರೆ. ಡಾಲಿ ಧನಂಜಯ್ ಅವರು ಕವಿತೆ ಕಾವ್ಯ ಹಾಡುಗಳನ್ನು ಅದ್ಭುತವಾಗಿ ಬರೆಯುತ್ತಾರೆ. ಅದೇ ರೀತಿ ತಮ್ಮ ಮದುವೆ ಆಮಂತ್ರಣ ಪತ್ರವನ್ನ ಸಖತ್ ಸ್ಪೆಷಲ್ ಆಗಿ ಬರೆದಿದ್ದಾರೆ.
ಇನ್ನು ಪೂಜೆ ಮಾಡಿಸಿದ ನಂತರ ಮದುವೆಯ ಮೊದಲ ಇನ್ವಿಟೇಷನ್ ಅನ್ನು ರಾಜ್ಯದ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿ ಡಾಲಿ ಮತ್ತು ಧನ್ಯತಾ ಆಶೀರ್ವಾದ ಪಡೆದಿದ್ದಾರೆ. ಡಾಲಿ ಧನಂಜಯ ಅವರು ಸಿನಿಮಾ ಕ್ಷೇತ್ರದಲ್ಲಿದ್ದರೂ ರಾಜಕೀಯ ಗಣ್ಯರ ಜೊತೆಯೂ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದಾರೆ. ಸಿಎಂ ಮಾತ್ರವಲ್ಲದೇ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರಿಗೂ ಕೂಡ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನ ನೀಡಿ ಆಶೀರ್ವಾದ ಪಡೆದಿದ್ದಾರೆ. ಹೆಚ್ ಡಿ ಡಿ. ಕುಟುಂಬಸ್ಥರು ದೆಹಲಿಯಿಂದ ಆಗಮಿಸಿದ ನಂತರ ಡಾಲಿ -ಧನ್ಯತ ದೇವೇಗೌಡರನ್ನ ಭೇಟಿ ಮಾಡಿ ಪತ್ರಿಕೆ ನೀಡಲಿದ್ದಾರೆ .
ಫೆಬ್ರವರಿ 16 ರಂದು ಡಾಲಿ ಧನಂಜಯ ಅವರ ಮದುವೆ ಮೈಸೂರಿನ ಅಂಬಾವಿಲಾಸ ಅರಮನೆಯ ಮುಂಭಾಗದ ವಸ್ತು ಪ್ರದರ್ಶನ ಗ್ರೌಂಡ್ ನಲ್ಲಿ ನಡೆಯಲಿದೆ. ಶನಿವಾರ ಆರತಕ್ಷತೆ ಭಾನುವಾರ ವಿವಾಹ ನೆರವೇರಲಿದೆ.
ಸದ್ಯ ಇಂದಿನಿಂದ ಪತ್ರಿಕೆ ಹಂಚಲು ಶುರು ಮಾಡಿದ್ದು ಡಾಲಿ ಮದುವೆಗೆ ಕೇಲವ ಸಿನಿಮಾ ಗಣ್ಯರು ಮಾತ್ರವಲ್ಲದೇ ರಾಜಕೀಯ ಗಣ್ಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.