ನಾಡಹಬ್ಬ ದಸರಾ ಮಹೋತ್ಸವಕ್ಕೆ ಮಾಜಿ ಸಿಎಂ ಎಸ್.ಎಂ.ಕೃಷ್ಣರಿಂದ ವಿದ್ಯುಕ್ತ ಚಾಲನೆ
1 min readಮೈಸೂರು,ಅ.7-ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ನಾಡಅಧಿದೇವತೆ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ವಿದ್ಯುಕ್ತ ಚಾಲನೆ ದೊರೆಯಿತು.
ಇಂದು ಬೆಳಿಗ್ಗೆ ಶುಭಲಗ್ನದಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆಗೈದು, ದೀಪ ಬೆಳಗುವ ಮೂಲಕ 411ನೇ ಮೈಸೂರು ದಸರಾಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಚಾಲನೆ ನೀಡಿದರು. ಇಂದಿನಿಂದ ಮೈಸೂರಿನಲ್ಲಿ ನವರಾತ್ರಿ ಸಂಭ್ರಮ ಕಳೆಗಟ್ಟಿದೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ವಿ.ಸುನಿಲ್ ಕುಮಾರ್, ಶಶಿಕಲಾ ಜೊಲ್ಲೆ, ಬಿ.ಸಿ.ಪಾಟೀಲ್, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್, ಡಾ.ಕೆ.ಸುಧಾಕರ್, ನಾರಾಯಣಗೌಡ, ಮಹಾಪೌರರಾದ ಸುನಂದಾ ಪಾಲನೇತ್ರ, ಸಂಸದ ಪ್ರತಾಪಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಅರವಿಂದ್ ಬೆಲ್ಲದ್, ಕೆ.ಮಹದೇವ್, ಬಿ.ಹರ್ಷವರ್ಧನ, ವಿಧಾನ ಪರಿಷತ್ ಸದಸ್ಯರಾದ ಎ.ಎಚ್.ವಿಶ್ವನಾಥ್, ನಿಗಮಮಂಡಳಿ ಅಧ್ಯಕ್ಷರಾದ ಎಂ.ಅಪ್ಪಣ್ಣ, ಕಾ.ಪು.ಸಿದ್ದಲಿಂಗಸ್ವಾಮಿ, ಎಲ್.ಆರ್.ಮಹದೇವಸ್ವಾಮಿ, ಎನ್.ವಿ.ಫಣೀಶ್, ಎಚ್.ವಿ.ರಾಜೀವ್, ನಂದೀಶ್ ಹಂಚೆ, ಎಸ್.ಮಹದೇವಯ್ಯ, ಎನ್.ಆರ್.ಕೃಷ್ಣಪ್ಪ ಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಇತರರು ಉಪಸ್ಥಿತರಿದ್ದರು.