ದಸರಾ ದೀಪಾಲಂಕಾರದ ಸಮಯ ರಾತ್ರಿ 10.30 ರವರೆಗೆ ವಿಸ್ತರಣೆ

1 min read

ಮೈಸೂರು,ಅ.9-ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ದೀಪಾಲಂಕಾರದ ಸಮಯವನ್ನು ಪ್ರವಾಸಿಗರು ಹಾಗೂ ಸಾರ್ವಜನಿಕರ‌ ಮನವಿ ಮೇರೆಗೆ ವಿಸ್ತರಿಸಲಾಗಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ತಿಳಿಸಿದ್ದಾರೆ.

ಜಯವಿಭವ ಸ್ವಾಮಿ

ದಸರಾ‌ ದೀಪಾಲಂಕಾರದ ಸಮಯವನ್ನು ಸಂಜೆ 6.30 ರಿಂದ ರಾತ್ರಿ 10.30 ರವರೆಗೆ ವಿಸ್ತರಿಸಲಾಗಿದೆ. ದೀಪಾಲಂಕಾರವನ್ನು 6.30 ರಿಂದ 9.30 ರವರೆಗೆ ಆಯೋಜಿಸಲಾಗಿತ್ತು. ಆದರೆ ಈ ಸಮಯದಲ್ಲಿ ಟ್ರಾಫಿಕ್ ಸಮಸ್ಯೆ ಜಾಸ್ತಿಯಾಗಿದ್ದು,  ರಾತ್ರಿ 9.30ರ ಬಳಿಕವೂ ದೀಪಾಲಂಕಾರವನ್ನು ನೋಡಲು ಸಹಸ್ರ ಜನರು ಬರುತ್ತಿದ್ದಾರೆ. ಹೀಗಾಗಿ ಸಮಯವನ್ನು ರಾತ್ರಿ 10.30 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ ಆಯುಧ ಪೂಜೆ ಹಾಗೂ ವಿಜಯದಶಮಿ ದಿನದಂದು ಸಂಜೆ 6.30 ರಿಂದ ರಾತ್ರಿ 11 ಗಂಟೆಯವರೆಗೆ ದೀಪಾಲಂಕಾರ ಇರಲಿದ್ದು, ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಜಯವಿಭವ ಸ್ವಾಮಿ ಮನವಿ ಮಾಡಿದ್ದಾರೆ.

ದಸರಾ ಹಿನ್ನೆಲೆಯಲ್ಲಿ ದೀಪಾಲಂಕಾರವನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪ್ರಾಯೋಜಕತ್ವದಲ್ಲಿ ವಿಶೇಷವಾಗಿ ಹಾಗೂ ವಿಭಿನ್ನವಾಗಿ 102 ಕಿ.ಮೀ ವರೆಗೆ ದೀಪಾಲಂಕಾರ ಮಾಡಲಾಗಿದೆ. 41 ವೃತ್ತಗಳಲ್ಲಿ ವಿಶಿಷ್ಟವಾಗಿ ದೀಪಾಲಂಕಾರ ಮಾಡಲಾಗಿದ್ದು, ಸಾರ್ವಜನಿಕರು ದೀಪಾಲಂಕಾರವನ್ನು ನೋಡಿ ಕಣ್ತುಂಬಿಕೊಂಡು ಸಂತಸ ಪಡುತ್ತಿದ್ದಾರೆ.

About Author

Leave a Reply

Your email address will not be published. Required fields are marked *