ಮೈಸೂರಿನಲ್ಲಿ ನಿನ್ನೆಯ ಪಾಸಿಟಿವಿಟಿ ದರ ಶೇ.5.62%- ಡಿಸಿ ಬಗಾದಿ ಗೌತಮ್ ಮಾಹಿತಿ!

1 min read

ಮೈಸೂರು : ಕೊರೊನಾ ಮೂರನೇ ಅಲೆ ಕುರಿತು ಮಾಹಿತಿ ನೀಡುವ ಸಲುವಾಗಿ ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಇಂದಿನವರೆಗೆ ವರದಿಯಾಗಿರುವ ಕೊರೊನಾ ಪ್ರಕರಣಗಳ ಪೈಕಿ 125 ಮಂದಿ ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದು, ಉಳಿದವರು ಹೋಂ ಐಸೋಲೇಷನ್ ನಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ರು. ನಿನ್ನೆಯ ಕೊರೊನಾ ಪರೀಕ್ಷೆ ವರದಿ ಪ್ರಕಾರ ಪಾಸಿಟಿವಿಟಿ ದರ 5.62% ಇದೆ. ಒಂದು ವಾರದ ಪಾಸಿಟಿವಿಟಿ ದರ 2.05% ಇದೆ. ಮೈಸೂರು ಜಿಲ್ಲೆಯಲ್ಲಿ ವರದಿಯಾಗುತ್ತಿರುವ ಪಾಸಿಟಿವಿಟಿ ಪ್ರಕರಣಗಳಲ್ಲಿ ಶೇಕಡ 80% ರಷ್ಟು ಮೈಸೂರು ನಗರ ಹಾಗೂ ಮೈಸೂರು ತಾಲ್ಲೂಕಿನಲ್ಲಿ ವರದಿಯಾಗಿವೆ. ಮೊದಲ ಕೊರೊನಾ ಡೋಸ್ ಪಡೆದಿರುವವರ ಪ್ರಮಾಣ ಶೇಕಡ 96.5% ರಷ್ಟಿದೆ.
ಎರಡನೇ ಡೋಸ್ ಪಡೆದವರ ಪ್ರಮಾಣ ಶೇಕಡ 82% ರಷ್ಟಿದೆ ಎಂದ್ರು.

  • ಇನ್ನು ಮೈಸೂರು ಜಿಲ್ಲೆಯಾದ್ಯಂತ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಮಂಡಕಳ್ಳಿಯಲ್ಲಿರುವ ಕೋವಿಡ್ ಕೇರ್ ಸೆಂಟರ್ ಇಂದಿನಿಂದ ಕಾರ್ಯಾರಂಭ ಮಾಡಿದ್ದು, ಕೋವಿಡ್ ವಾರ್ ರೂಮ್ ಕೂಡ ಸಿದ್ಧವಾಗಿದೆ. ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸಲಹೆ ಸೂಚನೆ ನೀಡಲಾಗಿದೆ. ಕೊರೊನಾ ಲಸಿಕೆ ಪಡೆಯದವರಿಗೆ ಕೂಡಲೇ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಮಾಸ್ಕ್ ಧರಿಸದೇ ಸಂಚರಿಸುವವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲಾಡಳಿತದ ಜೊತೆ ಜನರು ಸಹಕರಿಸಬೇಕು.
    ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಆದಷ್ಟು ಎನ್ 95 ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದಿದ್ದರೇ 99% ಸೋಂಕು ತಗುಲುವ ಸಾಧ್ಯತೆ ಇದೆ. ಒಂದು ವೇಳೆ ಕೊರೊನಾ ಸೋಂಕು ತಗುಲಿದರೂ ಗಾಬರಿಯಾಗಬಾರದು ಎಂದ್ರು.
    ಅಲ್ಲದೆ ಅವಶ್ಯಕತೆ ಇರುವವರು ಮಾತ್ರ ಆಸ್ಪತ್ರೆಗೆ ದಾಖಲಾಗಿ. ಅನಗತ್ಯವಾಗಿ ಆಸ್ಪತ್ರೆಗೆ ದಾಖಲಾಗಬೇಡಿ. ಆಗ ಮಾತ್ರ ಕೊರೊನಾದ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇನ್ನು ಮೈಸೂರು ಜಿಲ್ಲೆಯಲ್ಲಿ ಒಂದು ಡೋಸ್ ಪಡೆಯದ 90 ಸಾವಿರ ಮಂದಿ ಬಾಕಿ ಇದ್ದಾರೆ. ಇವರು ಕೊರೊನಾ ಸೋಂಕಿಗೆ ತುತ್ತಾಗುವುದು ಶೇಕಡ 10 ಪಟ್ಟು ಹೆಚ್ಚಿದೆ. ಇದುವರೆಗೂ ಕೊರೊನಾ ಲಸಿಕೆ ಪಡೆಯದವರು ದಯವಿಟ್ಟು ಹಠ ಮಾಡದೇ ಲಸಿಕೆ ಹಾಕಿಸಿಕೊಳ್ಳಬೇಕೆಂದು ಮನವಿ ಮಾಡಿದರು. ಅಲ್ಲದೆ ಮುಂಬರುವ ದಿನಗಳಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ಹೆಚ್ಚಿಸಲಾಗುವುದು. ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ವಸ್ತು ಪ್ರದರ್ಶನವನ್ನು ಬಂದ್ ಮಾಡುವಂತೆ ಸೂಚಿಸಲಾಗಿದೆ. ಶಾಲಾ ಕಾಲೇಜುಗಳಲ್ಲಿ ಕೋವಿಡ್ ಮಾರ್ಗ ಸೂಚಿಗಳ ಕಟ್ಟುನಿಟ್ಟಿನ ಪಾಲನೆ ಮಾಡುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಇಂದಿನಿಂದ ಬೂಸ್ಟರ್ ಡೋಸ್

ಇನ್ನು ಇಂದಿನಿಂದಲೇ ಮೈಸೂರು ಜಿಲ್ಲೆಯಾದ್ಯಂತ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಜಿಲ್ಲೆಯಾದ್ಯಂತ 4.67 ಲಕ್ಷ ಮಂದಿ ಬೂಸ್ಟರ್ ಡೋಸ್ ಪಡೆಯಲು ಅರ್ಹರಾಗಿದ್ದು, ಎರಡನೇ ಡೋಸ್ ಪಡೆದು 9 ತಿಂಗಳಾಗಿರುವ ಅರ್ಹರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಮಾಹಿತಿ ನೀಡಿದ್ರು.

About Author

Leave a Reply

Your email address will not be published. Required fields are marked *