ಉಚಿತ ಬಸ್ ಪಾಸ್ ಗೆ ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ

1 min read

ಮೈಸೂರು, ಅ.4-ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಸ್ತುತ ಶೈಕ್ಷಣಿಕ ವರ್ಷದ ಬಸ್ ಪಾಸ್ ಅನ್ನು ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿ ಎಐಡಿಎಸ್ ಓ ನವರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಸ್ತುತ ಶೈಕ್ಷಣಿಕ ವರ್ಷದ ಬಸ್ ಪಾಸ್ ಅನ್ನು ಉಚಿತವಾಗಿ ನೀಡಬೇಕು, ಅಲ್ಲಿಯವರೆಗೂ ಹಿಂದಿನ ವರ್ಷದ ಪಾಸ್ ಅಥವಾ ಶಾಲಾ-ಕಾಲೇಜಿನ ಗುರುತಿನ ಚೀಟಿಯೊಂದಿಗೆ ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಅನುಮತಿಯನ್ನು ನೀಡಿ ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿಯ ಸದಸ್ಯ ನಿತಿನ್, ಜಿಲ್ಲಾ ಉಪಾಧ್ಯಕ್ಷರಾದ ಆಸಿಯಾ, ವಿದ್ಯಾರ್ಥಿಗಳಾದ ಚಂದನ್ , ನವೀನ್, ಅಭಿಷೇಕ್, ಮಂಜು, ತನ್ವೀರ್, ವಿನಯ್, ಪವನ್, ಯಶವಂತ್ ಗಣೇಶ್, ತೇಜಸ್ ಇತರರು ಇದ್ದರು.

About Author

Leave a Reply

Your email address will not be published. Required fields are marked *