ದಸರಾ ಆಚರಣೆ: ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಸಭೆ

1 min read

ಮೈಸೂರು,ಸೆ.20-ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿಯೂ ಸರಳ ದಸರಾ ಆಚರಣೆ ಮಾಡಲಾಗಿದ್ದು, ಸಿದ್ಧತೆ ಕುರಿತು ತಿಳಿದುಕೊಳ್ಳಲು ಇಂದು ಜಿಲ್ಲಾಧಿಕಾರಿಗಳೂ ಹಾಗೂ ದಸರಾ ವಿಶೇಷಾಧಿಕಾರಿಯೂ ಆಗಿರುವ ಡಾ.ಬಗಾದಿ ಗೌತಮ್ ಸಭೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ದಸರಾ ಉನ್ನತಾಧಿಕಾರ ಸಮಿತಿಯ ಸೂಚನೆಗಳು ಮತ್ತು ಕಾರ್ಯಕಾರಿ ಸಮಿತಿಯ ನಿರ್ಣಯಗಳಂತೆ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಉನ್ನತಾಧಿಕಾರ ಸಮಿತಿ ಮತ್ತು ಕಾರ್ಯಕಾರಿ ಸಮಿತಿಯಲ್ಲಿ ತೀರ್ಮಾನಿಸಿದಂತೆ ಆಯೋಜಿಸಲು ಅಧಿಕಾರಿಗಳು ಮಾಡಿಕೊಂಡಿರುವ ಪೂರ್ವ ಸಿದ್ಧತೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಈಗಾಗಲೇ 6 ಉಪ ಸಮಿತಿಗಳನ್ನು ರಚಿಸಲಾಗಿದೆ. ಈ ಆರು ಸಮಿತಿಗಳು ಕಳೆದ ವರ್ಷ ಮಾಡಿದ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು, ಈ ವರ್ಷ ಮಾಡಬೇಕಾದ ಕೆಲಸಗಳ ಬಗ್ಗೆ ಸಲಹೆ ಸೂಚನೆ ನೀಡಿದರು.
ಸ್ವಾಗತ ಮತ್ತು ಆಮಂತ್ರಣ ಉಪ ಸಮಿತಿ, ದೀಪಾಲಂಕಾರ ಉಪ ಸಮಿತಿ, ಮೆರವಣಿಗೆ ಉಪಸಮಿತಿ, ಸಾಂಸ್ಕೃತಿಕ ದಸರಾ ಉಪ ಸಮಿತಿ, ಸ್ತಬ್ಧಚಿತ್ರ ಉಪ ಸಮಿತಿ, ಸ್ವಚ್ಛತೆ ಮತ್ತು ವ್ಯವಸ್ಥೆ ಉಪಸಮಿತಿಗಳ ಜವಾಬ್ದಾರಿಗಳನ್ನು ವಿವರಿಸಿದರು.
ಸಭೆಯಲ್ಲಿ ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ.ಯೋಗೀಶ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಡಿಸಿಪಿ ಪ್ರದೀಪ್ ಗುಂಟಿ, ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ ಇತರರು ಮತ್ತಿತರರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *