ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ
1 min read
ಮೈಸೂರು,ಅ.1-ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಪೋಸ್ಟರ್ ಅನ್ನು ಸಚಿವರಾದ ಎಸ್.ಟಿ.ಸೋಮಶೇಖರ್, ಸುನೀಲ್ ಕುಮಾರ್ ಬಿಡುಗಡೆಗೊಳಿಸಿದರು.
ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿಯ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು.
ಈ ವೇಳೆ ಮಾತನಾಡಿದ ಸಚಿವ ಸೋಮಶೇಖರ್ ಅವರು, ಕೋವಿಡ್ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಸರಳ ಮತ್ತು ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುವುದು. ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಹೆಚ್ಚು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾವಿದರಿಗೆ ಹೆಚ್ಚು ಅವಕಾಶ ನೀಡುವಂತೆ ಹೇಳಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುದಾನ ಕಡಿತ ಮಾಡಬೇಡಿ. ಪ್ರತಿನಿತ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ.
ಅ.7ರಿಂದ 13ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಸಂಜೆ 6 ರಿಂದ 9ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ಸಭೆಗೆ ಆಗಮಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಅವರಿಗೆ ಸಚಿವ ಸೋಮಶೇಖರ್ ಅವರು ಧನ್ಯವಾದ ತಿಳಿಸಿದರು.
ಸಭೆಯಲ್ಲಿ ಶಾಸಕ ಹರ್ಷವರ್ಧನ್, ಸಂಸದ ಪ್ರತಾಪ್ ಸಿಂಹ, ಮೂಡಾ ಅಧ್ಯಕ್ಷ ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ.ಯೋಗೀಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.