ಮೈಸೂರಲ್ಲಿ ಒಂದೇ ದಿನ 1500 ಪಾಸಿಟಿವ್ ಕೇಸ್ ಬಗ್ಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟನೆ
1 min readಮೈಸೂರು: ಮೈಸೂರಿನನಲ್ಲಿ ಸೋಮವಾರ ಒಂದೇ ದಿನ 1500ಕ್ಕೂ ಅಧಿಕ ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟನೆ ನಿಡಿದ್ದಾರೆ.
ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮೈಸೂರಿನಲ್ಲಿ ನಿನ್ನೆ ಒಂದೇ ದಿನ 1563 ಪಾಸಿಟಿವ್ ಕೇಸ್ ವರದಿಯಾಗಿತ್ತು. ಈ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಅದು ಹಳೆಯ ಅಂಕಿ ಅಂಶಗಳೆಲ್ಲಾ ಸೇರಿ ನೀಡಿದ ಒಟ್ಟು ಪಾಸಿಟಿವ್ ವರದಿ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟನೆ ಕೊಟ್ಟಿದ್ದಾರೆ.
ನಾವು 700 ರ ಆಸುಪಾಸಿನಲ್ಲಿ ಇದ್ದೇವೆ. ಅಂಕಿ ಅಂಶಗಳು ಎರಡು ದಿನದು ಸೇರಿದಾಗ ಈ ರೀತಿ ಹೆಚ್ಚಾದಂತೆ ಕಾಣುತ್ತದೆ. ಸಾವಿರ ದಾಟಿದೆ ಎಂದು ಆತಂಕಪಡುವ ಅವಶ್ಯಕತೆ ಇಲ್ಲ ಎಂದರು.
2-3 ದಿನದಲ್ಲಿ ಆಕ್ಸಿಜನ್ ಸಮಸ್ಯೆಯಾಗಲಿದೆ
ಶೀಘ್ರದಲ್ಲೇ ಆಕ್ಸಿಜನ್ ಸರಬರಾಜು ಆಗದಿದ್ದರೆ ಇನ್ನು ಎರಡು ಮೂರು ದಿನದಲ್ಲಿ ನಮಲ್ಲಿ ಸಮಸ್ಯೆಯಾಗಲಿದೆ ಎಂದು ರೋಹಿಣಿ ಸಿಂಧೂರಿ ಅವರು ಆತಂಕ ವ್ಯಕ್ತಪಡಿಸಿದರು.
ಹೊಸ ಪ್ಲ್ಯಾಂಟ್‌ಗೆ ಅನುಮತಿ ಸಿಕ್ಕಿದೆ. ಆದರೆ ಅದಕ್ಕೆ ಕನಿಷ್ಠ 25 ದಿನ ಬೇಕು. ನಮಗೆ ತುರ್ತಾಗಿ ಪರ್ಯಾವಾಗಿ ಆಕ್ಸಿಜನ್ ಬೇಕಾಗಿದೆ. ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗಿದೆ ಎಂದರು.
ವಾರಾಂತ್ಯದಲ್ಲಿ 50 ವೆಂಟಿಲೇಟರ್ ನೀಡುವ ಭರವಸೆ ಸರ್ಕಾರ ನೀಡಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಡ್ ಇಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಡ್ ಇದೆ. ವಾರಾಂತ್ಯದಲ್ಲಿ ಮತ್ತಷ್ಟು ವೆಂಟಿಲೇಟರ್ ಬೆಡ್‌ಗಳು ಸಿಗಲಿವೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.