ಕೊರೊನಾ ಸೋಂಕಿತ ಮೃತ: ರೋಗಿಯ ಸಂಬಂಧಿಗಳಿಂದ ವೈದ್ಯರು, ಸಿಬ್ಬಂದಿಗಳ ಮೇಲೆ ಹಲ್ಲೆ
1 min readಮೈಸೂರು: ಕೊರೊನಾ ಸೋಂಕಿತ ಮೃತ ರೋಗಿಯ ಸಂಬಂಧಿಗಳಿಂದ ವೈದ್ಯರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಘಟನೆ ನಡೆದಿದ್ದು, ಗೌಸಿಯಾ ನಗರದ 55 ವರ್ಷದ ಸೋಂಕಿತರೊಬ್ಬರು ಆಸ್ಪಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಡ್, ಐಸಿಯು ಬೆಡ್ ಖಾಲಿ ಇಲ್ಲ ಎಂದು ವೈದ್ಯರು ತಿಳಿಸಿದ್ದರು. ಆದರೆ ಕಡೆ ಕ್ಷಣದಲ್ಲಿ ರೋಗಿ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಸೋಂಕಿತನ ಕಂಡಿಷನ್ ಬಗ್ಗೆ ಸೋಂಕಿತರ ಸಂಬಂಧಿಗಳಿಗೆ ವೈದ್ಯರು ತಿಳಿಸಿದ್ದರು. ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕುಟುಂಬಸ್ಥರು ಇಚ್ಚಿಸಿರಲಿಲ್ಲ. ಈ ವೇಳೆ ಎರಡು ದಿನ ಕೆ.ಆರ್.ಆಸ್ಪತ್ರೆಯಲ್ಲೆ ಚಿಕಿತ್ಸೆ ನೀಡಲಾಗಿತ್ತು ಆದರೆ ಕಳೆದ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ರೋಗಿ ಸಾವಿಗೀಡಾಗಿದ್ದರು.
ಇದರಿಂದ ರೊಚ್ಚಿಗೆದ್ದ ಸೋಂಕಿತ ಕುಟುಂಬಸ್ಥರು ಆಸ್ಪತ್ರೆಯ ಇಬ್ಬರು ವೈದ್ಯರು, ಇಬ್ಬರು ನರ್ಸ್, ಅಂಬೂಲೆನ್ಸ್ ಡ್ರೈವರ್ ಹಲ್ಲೆ ಮಾಡಿದ್ದಾರೆ. ಸದ್ಯ ತಮಗೆ ರಕ್ಷಣೆ ನೀಡಿ ಎಂದು ವೈದ್ಯರು ಮನವಿ ಮಾಡಿದ್ದಾರೆ. ಹಲ್ಲೆ ಮಾಡಿದ ಕುಟುಂಬಸ್ಥರು ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಡ್ಯೂಟಿ ಮಾಡುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಇಂದು ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ಇಂದದೇ ಕ್ರಮ ತೆಗೆದುಕೊಳ್ಳದಿದ್ದರೆ ಡ್ಯೂಟಿಗೆ ಗೈರಾಗುವುದಾಗಿ ವೈದ್ಯರು ಎಚ್ಚರಿಕೆ ನೀಡಿದ್ದಾರೆ.