ವರಮಹಾಲಕ್ಷ್ಮಿ ಹಬ್ಬ ಹಿನ್ನಲೆ’ ದೇವರಾಜ ಮಾರುಕಟ್ಟೆಯ ಹೂವಿನ ವ್ಯಾಪಾರಸ್ಥರ ಸ್ಥಳಾಂತರ!
1 min readಮೈಸೂರು : ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನ ದೇವರಾಜ ಮಾರುಕಟ್ಟೆಯ ಹೂ ವ್ಯಾಪಾರಸ್ಥರನ್ನ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಿ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮೈಸೂರಿನ ರೈಲ್ವೆ ನಿಲ್ದಾಣದ ಮುಂಭಾಗದ ಜೆ.ಕೆ.ಮೈದಾನಕ್ಕೆ ತಾತ್ಕಾಲಿಕವಾಗಿ ಹೂ ವ್ಯಾಪಾರಸ್ಥರ ಸ್ಥಳಾಂತರ ಮಾಡಲಾಗಿದ್ದು, ಇಂದಿನಿಂದ ಮೂರು ದಿನಗಳ ಕಾಲ ಸಗಟು ಹಾಗೂ ಚಿಲ್ಲರೆ ವ್ಯಾಪಾರಸ್ಥರನ್ನ ಸ್ಥಳಾಂತರ ಮಾಡಲಾಗಿದೆ. ಇನ್ನು ದೇವರಾಜ ಮಾರುಕಟ್ಟೆ ಕಿರಿದಾಗಿರುವ ಕಾರಣ ಈ ನಿರ್ಧಾರ ಮಾಡಲಾಗಿದ್ದು, ಕೋವಿಡ್ ಮುಂಜಾಗ್ರತವಾಗಿ ಹೂ ವ್ಯಾಪಾರಸ್ಥರ ಸ್ಥಳಾಂತರ ಮಾಡಲಾಗಿದೆ.