ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಸಾರ್ವಜನಿಕರಿಗೆ ತರಕಾರಿ, ದಿನಸಿ ಕಿಟ್ ವಿತರಣೆ
1 min read
ಮೈಸೂರು: ಮೈಸೂರಿನ ಶಾರದದೇವಿ ನಗರದಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಸಾರ್ವಜನಿಕರಿಗೆ ತರಕಾರಿ ಹಾಗೂ ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸಲಾಯಿತು. ಬಡವರು ಹಾಗೂ ಕೂಲಿ ಕಾರ್ಮಿಕ ಕುಟುಂಬಕ್ಕೆ ದಿನಸಿ ಕಿಟ್ ವಿತರಿಸಿದರು. ಇದೇ ವೇಳೆ ಮೈಸೂರು ನಗರ ಬಿಜೆಪಿ ಅಧ್ಯಕ್ಷ, ಶ್ರೀ ಶ್ರೀವತ್ಸ, ಬಿ.ಎಂ. ರಘು, ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.