ಮಹಿಳಾ ಪೌರಕಾರ್ಮಿಕರಿಗೆ ಸೀರೆ ವಿತರಣೆ
1 min readಮೈಸೂರು,ಸೆ.27-ಪ್ರಧಾನಿ ನರೇಂದ್ರ ಮೋದಿ ಹಾಗೂ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ ಸೇವೆ ಮತ್ತು ಸಮರ್ಪಣ ಕಾರ್ಯಕ್ರಮದಲ್ಲಿ ಇಂದು ಮಹಿಳಾ ಪೌರ ಕಾರ್ಮಿಕರಿಗೆ ಸೀರೆ ವಿತರಿಸಲಾಯಿತು.
ನಗರದ ಗಾಂಧಿನಗರದ ಎಫ್ ಟಿ ಎಸ್ ವೃತ್ತದಲ್ಲಿ ಎಸ್ ಸಿ ಮೋರ್ಚಾ ವತಿಯಿಂದ ಪೌರ ಕಾರ್ಮಿಕರಿಗೆ ಸೀರೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮಹಾಪೌರರಾದ ಸಂದೇಶ್ ಸ್ವಾಮಿ, ನಗರ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ನಗರ ಪಾಲಿಕೆ ಸದಸ್ಯರಾದ ಅಶ್ವಿನಿ ಶರತ್, ಆಶಾ ನಾಗ್ಭೂಷಣ್ ಸಿಂಗ್, ಸೂ. ಮುರುಳಿ, ಕ್ಷೇತ್ರ ಎಸ್ ಸಿ ಮೋರ್ಚಾ ಅಧ್ಯಕ್ಷರು ಸತೀಶ್, ಶಾಂತರಾಜು, ಜೈಕುಮಾರ್, ಚೇತನ್, ರಾಜೇಂದ್ರ, ವಿನೋದ್ ಇತರರು ಉಪಸ್ಥಿತರಿದ್ದರು.