ವೋಟ್ ಮಾಡಲು ಸೋಮವಾರ ಇವರಿಗೆ ರಜೆ ಘೋಷಣೆ!
1 min readದಿನಾಂಕ 13.06.2022 ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಈ ಕೆಳಕಂಡ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದೈವಾರ್ಷಿಕ ಚುನಾವಣೆಯನ್ನು ನಡೆಸಲು ಘೋಷಿಸಲಾಗಿರುತ್ತದೆ. ಆದ ಕಾರಣ-
- ಕ್ಷೇತ್ರದ ಹೆಸರು ಕರ್ನಾಟಕ ವಾಯವ ಪದವೀಧರರ ಕ್ಷೇತ್ರ ಕ್ಷೇತ್ರದ ವ್ಯಾಪ್ತಿ – ಜಿಲ್ಲೆಗಳು ವಿಜಯಪುರ , ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳು.
2 ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರ ಮೈಸೂರು , ಚಾಮರಾಜನಗರ , ಮಂಡ್ಯ , ಮತ್ತು ಹಾಸನ ಜಿಲ್ಲೆಗಳು.
- ಕರ್ನಾಟಕ ವಾಯವ್ಯ ಶಿಕ್ಷಕರ ಕ್ಷೇತ್ರ ವಿಜಯಪುರ , ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳು.
- ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರ ಧಾರವಾಡ , ಹಾವೇರಿ , ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು.
ಈ ಮೇಲಿನ ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು , ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು , ಎಲ್ಲಾ ಶೈಕ್ಷಣಿಕ ಸಂಸ್ಥೆಗಳು , ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು , ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು , ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು , ಉಳಿದ ಕೈಗಾರಿಕ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ , ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ , ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ Establishment ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತ ಮತ ಚಲಾಯಿಸಲಿರುವ ಮತದಾರರಿಗೆ ದಿನಾಂಕ : 13.06.2022 ರ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಆದೇಶಿಸಲಾಗಿದೆ.