ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ 40 ಕೊಲೆಗಳಾಗಿವೆ: ಶ್ರೀರಾಮುಲು

1 min read

ಮೈಸೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಕಾರ್ಯಕರ್ತರ ಹತ್ಯೆ ಶುರುವಾಗುತ್ತದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾನೂನನ್ನು ಗಂಟು ಮೂಟೆ ಕಟ್ಟಿ ಬಿಸಾಕಲಾಗಿದೆ. ರಾಜ್ಯದ ಎಲ್ಲಾ ಕಡೆಗಳಲ್ಲೂ ಕೊಲೆ, ಹತ್ಯೆ, ದೌರ್ಜನ್ಯ ನಡೆಯುತ್ತಿವೆ. ಸಿಎಂ ಕ್ಷೇತ್ರದಲ್ಲೇ ಕಾನೂನು ಸುವ್ಯವಸ್ಥೆ ಹದೆಗಟ್ಟಿದೆ. ಅಂದ ಮೇಲೆ ರಾಜ್ಯದ ಬೇರೆ ಭಾಗಗಳ ಪರಿಸ್ಥಿತಿ ಹೇಗಿರಬೇಡ ಯೋಚಿಸಿ.?

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ, ಹಿರಿಯ ನಾಗರೀಕರಿಗೆ ರಕ್ಷಣೆ ಇಲ್ಲ. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ರಾಜ್ಯದ ಒಳಗಿ‌ನ ಜಿಹಾದಿ ಮನಃಸ್ಥಿತಿ ಇರುವ ಜನ ಎದ್ದು ಕೂರುತ್ತಾರೆ. ಹೀಗಾಗಿ ಕೊಲೆಗಳು ನಡೆಯುತ್ತವೆ. ವೇಣುಗೋಪಾಲ ನಾಯಕ ಕೊಲೆ ಪೂರ್ವ ನಿಯೋಜಿತ ಕೊಲೆ. ಜಿಹಾದಿ ಮನಃಸ್ಥಿತಿ ಜನ ಪ್ಲಾನ್ ಮಾಡಿಕೊಂಡು ಹಿಂದೂಗಳ ಕೊಲೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಈ ಕೊಲೆಗಳ ವಿಚಾರದಲ್ಲಿ ಗಂಭೀರತೆ ಇಲ್ಲ.

ಕಾಂಗ್ರೆಸ್ ನವರಿಗೆ ಅಧಿಕಾರದ ಅಹಂ ಜಾಸ್ತಿಯಾಗಿದೆ. ಸುಳ್ಳಿನ ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದವರು. ವೈಯಕ್ತಿಕ ವರ್ಚಸ್ಸಿನಿಂದ ಬಂದ ರೀತಿ ಮಾತಾನಾಡುತ್ತಿದ್ದಾರೆ. ವೇಣುಗೋಪಾಲ ನಾಯಕ ಹತ್ಯೆ ನಂತರ ಅವರ ಕುಟುಂಬಕ್ಕೆ ಸ್ಪಂದಿಸುವ ಕೆಲಸವನ್ನು ಸಿಎಂ ಮಾಡಿಲ್ಲ. ಸಿಎಂ ಸಮೇತ ಎಲ್ಲರು ಕಣ್ಮುಚ್ಚಿ ಕುಳಿತಿದ್ದಾರೆ. ಹಿಂದೂ ಕಾರ್ಯಕರ್ತರು ಮೇಲೆ ಈ ರೀತಿ ಘಟನಾವಳಿಗಳು ಮೇಲಿಂದ ಮೇಲೆ ನಡೆಯುತ್ತವೆ. ಹಿಂದೂ ಕಾರ್ಯಕರ್ತರು ಸ್ವಲ್ಪ ಜಾಗರೂಕರಾಗಿರಿ ಎಂದರು.

ಶವದ ಮೇಲೆ ಬಿಜೆಪಿ ಯಾವತ್ತೂ ರಾಜಕೀಯ ಮಾಡಿಲ್ಲ:

ಹಿಂದೂ ಸಂಘಟನೆಯ ಕಾರ್ಯಕರ್ತರ ಹತ್ಯೆಯಾದಾಗ ಅವರ ವಿರುದ್ದ ಧ್ವನಿ ಎತ್ತುವುದು ನಮ್ಮ ಜವಾಬ್ದಾರಿ. ಪೋಲಿಸ್ ತನಿಖೆಗೆ ಒತ್ತಡಗಳು ಉಂಟಾಗುವ ಅನುಮಾನ ನಮಗೆ ಇದೆ. ಸಿಬಿಐ ತನಿಖೆ ಮಾಡಿದರೆ ಸತ್ಯ ಹೊರಬರುತ್ತದೆ ಎಂದು ಹೇಳಿದರು.

ಜೈನ ಮುನಿ ಕೊಲೆ ಸಿಬಿಐಗೆ ನೀಡಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ.

ನಮ್ಮ ಪೋಲಿಸರು ಸಮರ್ಥರಿದ್ದಾರೆ. ಆದರೆ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಇದೆ. ಆ ಕಾರಣಕ್ಕೆ‌ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ವಹಿಸಬೇಕು. ವೇಣುಗೋಪಾಲ್‌ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ 40 ಕೊಲೆಗಳಾಗಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. 2013ರಲ್ಲೂ ಇದೇ ರೀತಿ ಪರಿಸ್ಥಿತಿ ಇತ್ತು. ಬೆಂಗಳೂರಿನ ಕೊಲೆ ಸಹಾ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿ ಎಂದರು.

About Author

Leave a Reply

Your email address will not be published. Required fields are marked *