ಕೋವಿಡ್ 3ನೇ ಅಲೆ ಭೀತಿ: ಅರಮನೆಯಲ್ಲಿ ನಡೆಯುವ ಶರನ್ನವರಾತ್ರಿ ಉತ್ಸವಕ್ಕೆ ಕುಟುಂಬಸ್ಥರಿಗೂ ನಿಷೇಧ

1 min read

ಮೈಸೂರು,ಅ.4- ಕೋವಿಡ್ ಮೂರನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ‌ ಮಹೋತ್ಸವದ ಪ್ರಯುಕ್ತ ಅರಮನೆಯಲ್ಲಿ ನಡೆಯಲಿರುವ ಶರನ್ನವರಾತ್ರಿ ಪೂಜಾ ವಿಧಿವಿಧಾನಗಳಲ್ಲಿ ಅರಮನೆ ಕುಟುಂಬಸ್ಥರ ಭಾಗವಹಿಸುವಿಕೆಯನ್ನು ನಿಷೇಧಿಸಲಾಗಿದೆ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಸಹ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಹೊರಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ


ಪ್ರಸ್ತುತ ಇರುವ ಕೋವಿಡ್-19 ಪ್ರಕರಣಗಳು ಹಾಗೂ ಮೂರನೇ ಅಲೆಯ ದೃಷ್ಟಿಯಿಂದ ಮೈಸೂರು ಅರಮನೆಯಲ್ಲಿ 2021 ಸಾಲಿನ ಶರನ್ನವರಾತ್ರಿ ಸಂದರ್ಭದಲ್ಲಿ ಪೂಜಾ ವಿಧಿಗಳನ್ನು ಕೇವಲ
ಸಾಂಪ್ರದಾಯಕವಾಗಿ ನಡೆಸಲಾಗುವುದು. ಮುನ್ನೆಚ್ಚರಿಕೆ ಕ್ರಮ ಅತ
ಅವಶ್ಯಕವಾಗಿರುವುದರಿಂದ, ಆಚರಣೆಯಲ್ಲಿ ಕುಟುಂಬ ಸದಸ್ಯರನ್ನೂ ಒಳಗೊಂಡಂತೆ ಸಾರ್ವಜನಿಕರ ಹಾಗೂ ಮಾಧ್ಯಮಗಳ ಭಾಗವಹಿಸುವಿಕೆ ಇರುವುದಿಲ್ಲ.
ಕೋವಿಡ್-19 ರ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ. ಎಲ್ಲರ ಸಂಪೂರ್ಣ ಸಹಕಾರವನ್ನು ನಿರೀಕ್ಷಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ.7ರಂದು ದಸರಾ‌ ಮಹೋತ್ಸವಕ್ಕೆ ಚಾಮುಂಡೇಶ್ವರಿ ದೇವಾಲಯದಲ್ಲಿ‌ ಮಾಜಿ ಸಿಎಂ ಎಸ್.ಎಂ.ಕೃಷ್ಣ ಚಾಲನೆ ನೀಡಲಿದ್ದಾರೆ. ಅಂದಿನಿಂದಲೇ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭಗೊಳ್ಳಲಿದೆ.

About Author

Leave a Reply

Your email address will not be published. Required fields are marked *