ರೈತರು ಬೆಳೆದ ಬೆಳೆಯ ಸಮೀಕ್ಷೆ ಈಗ ಇನ್ನು ಸುಲಭ!

1 min read

2021-22ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯಕ್ರಮದ ಭಾಗವಾಗಿ ಮಾನ್ಯ ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯು ಮುಂಗಾರು ಹಂಗಾಮಿನ ರೈತರ ಬೆಳೆ ಸಮಿಕ್ಷೆ ಆಪ್‌ನ್ನು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಬಿಡುಗಡೆ ಮಾಡಿದೆ. ಈ ಆ್ಯಪ್ಅನ್ನು ಬಳಸಿಕೊಂಡು ಸ್ವತಃ ರೈತರೇ ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳ ಸಮೀಕ್ಷೆಯನ್ನು ಮಾಡಿ ವಿವರಗಳನ್ನು ಅಪ್ ಲೋಡ್ ಮಾಡಬಹುದಾಗಿದೆ.

ಈ ಆ್ಯಪ್‌ನ ವೈಶಿಷ್ಟ್ಯತೆಗಳು:

-ರೈತರ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ರೈತರೇ ನಿಖರವಾಗಿ ದಾಖಲಿಸಬಹುದು.
ಸದರಿ ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆ ವಿಮೆ ಪರಿಹಾರ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಯೋಜನೆ ಮತ್ತು ಸರ್ಕಾರದ ವಿವಿಧ ಯೋಜನೆಗಳಡಿ ರೈತರಿಗೆ ಸವಲತ್ತುಗಳನ್ನು ಒದಗಿಸಲು ಮತ್ತು RTC ಯಲ್ಲಿ ಬೆಳೆ ಮಾಹಿತಿ ಅಳವಡಿಸಲು ಬಳಸಲಾಗುತ್ತದೆ.
-ದಿನಾಂಕ 31.08.2021 ರವರೆಗೆ ರೈತರೆ ತಮ್ಮ ಸ್ವಂತ ಜಮೀನಿನ ಬೆಳೆ ಸಮೀಕ್ಷೆ ಮಾಹಿತಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಕೃಷಿಯಲ್ಲಿ ಬೆಳೆ‌ನಷ್ಟವಾದ ಬಗ್ಗೆಯು‌ ಆಪ್‌ನಲ್ಲಿ ದಾಖಲಿಸಿ


ರೈತರ ಮುಂಗಾರು ಬೆಳೆ ಸಮೀಕ್ಷೆ 2021-22 ಆ್ಯಪ್ಅನ್ನು ಸಾರ್ವಜನಿಕರು ಗೂಗಲ್ ಪ್ಲೇ ಸ್ಟೋರ್ ನಲ್ಲಿ “Kharif Season Farmer Crop Survey 2021-22” ಎಂದು ಟೈಪ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬೇಕು.
-ರೈತರು ತಾವು ಬೆಳೆದ ಬೆಳೆ ವಿವರಗಳನ್ನು ಅಪ್ ಲೋಡ್ ಮಾಡದಿದ್ದಲ್ಲಿ ಸರ್ಕಾರದಿಂದ ವಿವಿಧ ಯೋಜನೆಗಳಡಿ ನೀಡುವ ಸವಲತ್ತುಗಳನ್ನು ಪಡೆಯುವುದರಿಂದ ವಂಚಿತರಾಗುವ ಸಂಭವವಿರುತ್ತದೆ.
-ಆದ್ದರಿಂದ, ಎಲ್ಲಾ ರೈತ ಬಾಂಧವರು ಹೆಚ್ಚಿನ ಆಸಕ್ತಿಯೊಂದಿಗೆ ಪ್ರಸಕ್ತ ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ತಾವೇ ಖುದ್ದಾಗಿ ದಾಖಲಿಸಲು ಕೋರಿದೆ.
-ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ / ಕೃಷಿ / ತೋಟಗಾರಿಕೆ/ ರೇಷ್ಮೆ / ಕಂದಾಯ ಇಲಾಖೆ ಕಛೇರಿ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಲಾಗಿರುವ ಖಾಸಗಿ ನಿವಾಸಿಗಳನ್ನು ಅಥವಾ ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ: 8448447715 ಅನ್ನು ಸಂಪರ್ಕಿಸಬಹುದಾಗಿದೆ.

         ಜಂಟಿ ಕೃಷಿ ನಿರ್ದೇಶಕರು,
        ಮೈಸೂರು ಜಿಲ್ಲೆ, ಮೈಸೂರು..

About Author

Leave a Reply

Your email address will not be published. Required fields are marked *