ಮೈಸೂರು ಮುಡಾದಲ್ಲಿ ಕಡತಗಳ ನಾಪತ್ತೆ!
1 min readಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯ ಕಡತಗಳಲ್ಲಿದ್ದ ಹಲವು ಮಹತ್ವದ ದಾಖಲೆಗಳು ಕಣ್ಮರೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಮುಡಾ ಅಧ್ಯಕ್ಷ ಹೆಚ್ ವಿ ರಾಜೀವ್ ರಿಂದ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ್ದು ಮುಡಾದಲ್ಲಿದ್ದ ಹಳೆಯ ದಾಖಲೆಗಳನ್ನು ಗಣಕೀಕರಣ ಮಾಡುವ ಸಂದರ್ಭದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ.
ದಾಖಲೆಗಳ ಕೆಲ ಪುಟಗಳು ನಾಪತ್ತೆಯಾಗಿರುವ ಸಂಗತಿ ಬಯಲಾಗಿದ್ದು, ಕಡತಗಳನ್ನು ಗಣಕೀರಣ ಮಾಡುವ ವೇಳೆ ಸ್ಕ್ಯಾನಿಂಗ್ ಮಾಡುವಾಗ ಅಂದಾಜು 300 ಪುಟಗಳು ಕಾಣೆಯಾಗಿರುವ ಸಂಗತಿ ಗೊತ್ತಾಗಿದೆ. ಈ ಬಗ್ಗೆ ಸಮಗ್ರ ವರದಿ ನೀಡುವಂತೆ ಸೂಚಿಸಲಾಗಿದ್ದು, ವರದಿ ಆಧರಿಸಿ ಸೂಕ್ತ ತನಿಖೆಗೆ ಆದೇಶಿಸಲಾಗುವುದು. ಹಾಗೂ ಪ್ರಕರಣ ಭೇದಿಸಲು ಯೋಜನೆಗಳನ್ನು ಹಾಕಿಕೊಳ್ಳಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮುಡಾ ಅಧ್ಯಕ್ಷ ಹೆಚ್ ವಿ ರಾಜೀವ್ ಹೇಳಿಕೆ ನೀಡಿದ್ದಾರೆ.