ಫಸ್ಟ್ PUC ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್’ 2nd PUC ಪರೀಕ್ಷೆ ಮುಂದೂಡಿಕೆ!
1 min readಬೆಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನ ಪಾಸ್ ಮಾಡಿರುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನ ತೇರ್ಗಡೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾರೆ. ಮೇ-24ರಿಂದ ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆಯನ್ನ ನಡೆಸದೆ ವಿದ್ಯಾರ್ಥಿಗಳಿಗೆ ಪಾಸ್ ಮಾಡಲಾಗಿದೆ.
ಅಲ್ಲದೆ ಇದೇ ದಿನಾಂಕದಲ್ಲಿ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ಕೂಡ ನಿಗಧಿ ಮಾಡಲಾಗಿತ್ತು. ಆದರೆ ದಿನೆ ದಿನೆ ಕೋವಿಡ್ ಹೆಚ್ಚಳವಾಗುತ್ತಿರುವ ಕಾರಣ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ಮುಂದಿನ ಆದೇಶದ ವರೆಗು ಮುಂದೂಡಿಸಲಾಗಿದೆ.