ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್ ಪೇಟೆ ಕೃಷ್ಣ ಇನ್ನಿಲ್ಲ
1 min readಮೈಸೂರು: ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್ ಪೇಟೆ ಕೃಷ್ಣ ಅವರು ಮೈಸೂರಿನ ನಿವಾಸದಲ್ಲಿ ಇಂದು ನಿಧನರಾಗಿದ್ದಾರೆ.
ಲಿವರ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಮನೆಗೆ ವಾಪಸ್ಸ್ ಆಗಿದ್ದು ಇಂದು ಮೈಸೂರಿನ ಕುವೆಂಪು ನಗರದ ನಿವಾಸದಲ್ಲಿ ನಿಧನರಾಗಿದ್ದಾರೆ.
ಕೃಷ್ಣ ಅವರು ಮಂಡ್ಯ ಜಿಲ್ಲೆಯ ಕೆಆರ್ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದವರು. ಮೂರು ಬಾರಿ ಕೆಆರ್ಪೇಟೆ ಕ್ಷೇತ್ರದಿಂದ ಶಾಸಕರಾಗಿದ್ದು, ಕೆ.ಆರ್.ಪೇಟೆ ಕೃಷ್ಣ ಅವರು ಧರ್ಮಸಿಂಗ್ ಮತ್ತು ಹೆಚ್.ಡಿ ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ ನಿಂದ ಸ್ಪೀಕರ್ ಆಗಿ ನೇಮಕಗೊಂಡಿದ್ದರು. ಕೊನೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಮೂರು ಬಾರಿ ಶಾಸಕ, ಒಂದು ಬಾರಿ ಎಂಪಿ ಆಗಿದ್ದ ಕೃಷ್ಣ ಅವರು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿ ಕೆಲಸ ಮಾಡಿದ್ದರು.
ಇನ್ನು ಮಾಜಿ ಸ್ಪೀಕರ್ ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಮಂಡ್ಯ ಜಿಲ್ಲೆಯ ಕೆಆರ್ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದಲ್ಲಿ ನಡೆಯಲಿದೆ. ಮಾಜಿ ಸ್ಪೀಕರ್ ಕೃಷ್ಣ ನಿವಾಸಕ್ಕೆ ರಾಜಕೀಯ ಮುಖಂಡರ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಸಚಿವ ನಾರಾಯಣಗೌಡ, ಶಾಸಕ ಸಾ.ರಾ.ಮಹೇಶ್ ಅಂತಿಮ ದರ್ಶನ ಪಡೆದರು.