ವಿಶೇಷ ಚೇತನರಿಗೆ ಪಾಲಿಕೆಯಿಂದ ಉಚಿತ ಕೋವಿಡ್ ಲಸಿಕೆ!
1 min read
18 ವರ್ಷ ಮೇಲ್ಪಟ್ಟ ವಿಶೇಷಚೇತನರಿಗೆ ಉಚಿತವಾಗಿ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ ನಾಲ್ಕು ಗಂಟೆಯವರೆಗು ಎರಡು ದಿನಗಳ ಕಾಲ ಮೈಸೂರಿನ ತಿಲಕ್‌ನಗರದ ಸಯ್ಯಾಜಿರಾವ್ ರಸ್ತೆಯ ಅಂಧ ಮಕ್ಕಳ ಸರ್ಕಾರಿ ಶಾಲೆಯಲ್ಲಿ ನೀಡಲಾಗುತ್ತಿದೆ.

ಮೈಸೂರಿನಲ್ಲಿರುವ ವಿಶೇಷ ಚೇತನರು ಇದರ ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಲಸಿಕೆಗೆ ಬರುವ ವಿಶೇಷ ಚೇತನರು, ತಮ್ಮ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ತರುವಂತೆ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
