ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಇನ್ನಿಲ್ಲ
1 min readಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ (103) ಅವರು ವಿಧಿವಶರಾಗಿದ್ದಾರೆ. ಇತ್ತೀಚಿಗೆ ದೊರೆಸ್ವಾಮಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದರು.
ಆದರೆ ಇಂದು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಏಪ್ರಿಲ್ 10, 1918ರಲ್ಲಿ ಜನಿಸಿದ್ದ ದೊರೆಸ್ವಾಮಿ ಅವರ ಪೂರ್ತಿ ಹೆಸರು ಹಾರೊಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ.
ಸಿಎಂ ಬಿ.ಎಸ್ ಯಡಿಯೂರಪ್ಪ ಸಾಂತ್ವನ:
ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.