ಪಾಲಿಕೆ ವ್ಯಾಪ್ತಿಯಲ್ಲಿ ಮನೆ ಬಾಗಿಲಿಗೆ ಬರಲಿದೆ ಬಗೆ ಬಗೆಯ ಹಣ್ಣು, ತರಕಾರಿಗಳು!
1 min read
ಮೈಸೂರು: ಮೈಸೂರು ಮಹಾನಗರ ವ್ಯಾಪ್ತಿಯಲ್ಲಿ ಕೈಗೆಟುಕುವ ದರದಲ್ಲಿ ಮನೆ ಮುಂದೆಕ್ಕೆ ತೆರಳಿ ತಾಜಾ ಹಣ್ಣು, ತರಕಾರಿ ಮಾರಾಟ ಮಾಡುವ ಹಾಪ್ ಕಾಮ್ಸ್ ವಾಹನಗಳಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶನಿವಾರ ಚಾಲನೆ ನೀಡಿದರು.
ಕೋವಿಡ್-೧೯ ಎರಡನೇ ಅಲೆಯನ್ನು ನಿಯಂತ್ರಿಸಲು ಜೂ.೭ರವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ನಾಗರಿಕರಿಗೆ ಅಗತ್ಯವಿರುವ ತರಕಾರಿ,ಹಣ್ಣುಗಳ ಪೂರೈಕೆಯನ್ನು ಒದಗಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ರೈತರಿಂದ ನೇರವಾಗಿ ಖರೀದಿಸಿ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಮನೆ ಮುಂದಗಡೆ ತಾಜಾ ಹಣ್ಣುಗಳು ಸಿಗುವಂತೆ ನೋಡಿಕೊಳ್ಳಲಾಗಿದೆ. ಇದರಿಂದಾಗಿ,ಯಾವುದೇ ಗ್ರಾಹಕರು ಹಣ್ಣು,ತರಕಾರಿಗಾಗಿ ಅಂಗಡಿಗಳ ಮುಂದೆ ಜಮಾಯಿಸಿ ಮುಗಿ ಬೀಳುವುದು ತಪ್ಪಿದಂತಾಗಿದೆ.
ಕೊರೊನಾ ಮೊದಲನೇ ಅಲೆಯಲ್ಲಿ ಜಿಲ್ಲಾಡಳಿತ, ಮೈಸೂರು ಮಹಾನಗರಪಾಲಿಕೆ, ತೋಟಗಾರಿಕೆ ಇಲಾಖೆ, ಜಿಲ್ಲಾ ಹಾಪ್‌ಕಾಮ್ಸ್ ವತಿಯಿಂದ ಮನೆ ಮನೆಗೆ ಹಣ್ಣು-ತರಕಾರಿಗಳನ್ನು ಪೂರೈಸುವ ವ್ಯವಸ್ಥೆ ಸಾಕಷ್ಟು ಅನುಕೂಲಕರವಾಗಿತ್ತು.
ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್,ಎಲ್.ನಾಗೇಂದ್ರ,ಹಾಪ್‌ಕಾಮ್ಸ್ ಅಧ್ಯಕ್ಷ ಅಣ್ಣೇಗೌಡ, ಮಹಾನಗರಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ನಾಗರಾಜು, ಉಪ ನಿರ್ದೇಶಕ ರುದ್ರೇಶ್, ಇನ್ನಿತರರು ಹಾಜರಿದ್ದರು.