ಮೈಸೂರಿನಲ್ಲಿ ಗ್ಯಾಂಗ್ ರೇಪ್? ಚಾಮುಂಡಿ ಬೆಟ್ಟದ ತಪ್ಪಲ್ಲಲ್ಲಿ ಘಟನೆ!
1 min read
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿದ್ದು, ಘಟನಾ ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದಿರುಬ ಬಗ್ಗೆ ಖಚಿತ ಪಡಿಸಿಕೊಳ್ಳಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಚಾಮುಂಡಿ ಬೆಟ್ಟದ ತಪ್ಪಲಿನ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಸಾಕ್ಷ್ಯಚದಾರಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಎಸಿಪಿ ಶಶಿಧರ್, ಇನ್ಸ್ ಪೆಕ್ಟರ್ ರವಿಶಂಕರ್, ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದಾರೆ. ಸ್ಥಳದಲ್ಲಿ ಎಫ್ಎಸ್ಎಲ್, ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡೆಯುತ್ತಿದೆ.
