ಗ್ಯಾಂಗ್ ರೇಪ್ ಆರೋಪಿಗಳನ್ನ ಸ್ಥಳ ಮಹಜರಿಗೆ ಕರೆತಂದ ಪೊಲೀಸರು!
1 min read
ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನ ಪೊಲೀಸರು ಸ್ಥಳ ಮಹಜರಿಗೆ ಕರೆ ತಂದಿದ್ದಾರೆ. ಮೈಸೂರಿನ ಹೊರವಲಯದ ಲಲಿತಾದ್ರಿಪುರದ ನಿರ್ಜನ ಪ್ರದೇಶಕ್ಕೆ ಮಹಜರಿಗಾಗಿ ಕರೆತಂದ ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದ ತಂಡ ಸ್ಥಳ ಮಹಜರು ಕಾರ್ಯ ನಡೆಸಿದ್ದಾರೆ. ಐವರು ಆರೋಪಿಗಳಿಂದ ಮಾಹಿತಿ ಕಲೆ ಹಾಕಿದ ಪೊಲೀಸರು, ಮಳೆಯ ನಡುವೆಯೂ ಮಹಜರ್ ಕಾರ್ಯ ಮುಗಿಸಿದ್ದಾರೆ. ಮೈಸೂರಿನ ಲಲಿತಾದ್ರಿಪುರದ ನಿರ್ಜನ ಪ್ರದೇಶದಲ್ಲಿ ನಡೆದಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಸದ್ಯ ಆರೋಪಿಗಳಿಂದ ಸ್ಥಳದ ಬಗ್ಗೆ ಮಾಹಿತಿ ಪಡೆದು ಗೌಪ್ಯತೆ ಕಾಪಾಡಲಿದ್ದಾರೆ.