ಜಿಟಿ ದೇವೇಗೌಡರ ಮೊಮ್ಮಗಳು ಗೌರಿ ನಿಧನ!

1 min read

ಜಿಟಿಡಿ ಮೊಮ್ಮಗಳು ಗೌರಿ ನಿಧನ.

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡರ ಮೊಮ್ಮಗಳು ಹಾಗೂ ಎಂಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಜಿ.ಡಿ. ಹರೀಶ್‌ಗೌಡ ಅವರ ಪುತ್ರಿ 3 ವರ್ಷದ ಗೌರಿ ನಿನ್ನೆ ರಾತ್ರಿ ನಿಧನ ಹೊಂದಿದ್ದಾಳೆ.

ಅನಾರೋಗ್ಯ ನಿಮಿತ್ತ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ದಾಖಲು ಮಾಡಲಾಗಿದ್ದ ಗೌರಿ ಚೇತರಿಸಿಕೊಂಡಿದ್ದಳು . ಆದರೆ ಇಂದು ಮಧ್ಯಾಹ್ನ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ರಾತ್ರಿ 12.30 ರ ವೇಳೆಗೆ ನಿಧನ ಹೊಂದಿದಳು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪಾರ್ಥಿವ ಶರೀರವನ್ನು ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರದ ಜಿ.ಟಿ.ದೇವೇಗೌಡರ ಮನೆಗೆ ತರಲಾಗುತ್ತಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಗೌಡರ ತೋಟದಲ್ಲಿ ಅಂತ್ಯ ಕ್ರಿಯೆ ನೆರವೇರಲಿದೆ ಎಂದು ತಿಳಿಸಲಾಗಿದೆ .

About Author

Leave a Reply

Your email address will not be published. Required fields are marked *