ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ‘ಯುವರತ್ನ’ ಚಿತ್ರ ತಂಡಕ್ಕೆ ದಂಡ
1 min readಸಿನಿಮಾ: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಯುವರತ್ನ’ ಚಿತ್ರ ತಂಡಕ್ಕೆ ದಂಡ ವಿಧಿಸಲಾಗಿದೆ.
ಚಿತ್ರತಂಡವು ಸಿನಿಮಾ ಪ್ರಚಾರದ ವೇಳೆ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಹಿನ್ನೆಲೆಯಲ್ಲಿ 20 ಸಾವಿರ ರೂ. ದಂಡ ವಿಧಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಲೆಟ್ಜ್ ಕಿಟ್ ಫೌಂಡೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ, ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, 2021ರ ಮಾ.21ರಂದು ಬೆಳಗಾವಿ, ಹುಬ್ಬಳ್ಳಿ-ಧಾರವಾಡದಲ್ಲಿ ಯುವರತ್ನ ಚಿತ್ರ ತಂಡ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ವೇಳೆ, ಭಾಗವಹಿಸಿದ್ದವರಲ್ಲಿ ಯಾರೊಬ್ಬರೂ ಮಾಸ್ಕ್ ಧರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪೊಲೀಸರು, ಚಿತ್ರ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂ ಪ್ರೋಡಕ್ಷನ್ ನಿಂದ 20 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ ಎಂದು ವಿವರಿಸಿದರು.