ಬೇಸಿಗೆ ಬೇಗೆ: ರಾಜ್ಯದ 9 ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ
1 min read
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಬೇಗೆ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯವನ್ನು ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬಿಸಲನಾಡಿನ ಕಲಬುರಗಿ ವಿಭಾಗಧ ಏಳು ಹಾಗೂ ಬೆಳಗಾವಿ ವಿಭಾಗದ 2 ಜಿಲ್ಲೆಗಳಲ್ಲಿ ಏಪ್ರಿಲ್ ಮತ್ತು ಮೇ ತಿಂಗಳ ಬಿಸಲಿನ ತಾಪ ಹೆಚ್ಚಾಗಿರವು ಹಿನ್ನೆಲೆಯಲ್ಲಿ ಸರಕಾರಿ ಕಚೆರಿಯ ಸಮಯ ಬದಲಿಸಿ ಸರಕಾರ ಆದೇಶ ಹೊರಡಿಸಿದೆ.

ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ಸಮಯ ಬದಲಿಸಿ ಆದೇಶ ಹೊರಡಿಸಿದೆ. ಕೆಲಸದ ಸಮಯವನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ರವರೆಗೆ ಬದಲಾವಣೆ ಮಾಡಲಾಗಿದೆ.
ಈ ಸಮಯದಲ್ಲಿ ಸಾರ್ವನಿಕರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾಯಾನಿರ್ವಹಣಾದಿಕಾರಿ ತುರ್ತು ಕೆಲಸ ನಿರ್ವಹಿಸಲು ಸೂಚಿಸಿದಲ್ಲಿ (ವಿಶೇಷವಾಗಿ ಕೋವಿಡ್-19) ಕಚೇರಿ ಸಮಯ ಬದಲಾವಣೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.