ಮೈಸೂರಿನ ಕನ್ನಡ ಪುಸ್ತಕ ಪ್ರೇಮಿಗೆ ಜಿ.ಪಿ.ರಾಜರತ್ನಂ ಪ್ರಶಸ್ತಿ
1 min readಮೈಸೂರು: ಮೈಸೂರಿನ ಕನ್ನಡ ಪುಸ್ತಕ ಪ್ರೇಮಿಗೆ ಜಿ.ಪಿ.ರಾಜರತ್ನಂ ಪ್ರಶಸ್ತಿ ದೊರೆತಿದೆ. ಪುಸ್ತಕ ಪ್ರೇಮಿ ಸೈಯದ್ ಇಸಾಕ್ ರಿಗೆ ಜಿ.ಪಿ.ರಾಜರತ್ನಂ ಪ್ರಶಸ್ತಿ ಲಭಿಸಿದೆ.
ಬೆಂಕಿ ಬಿದ್ದು ಮೈಸೂರಿನ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ರ ಗ್ರಂಥಾಲಯ ಸುಟ್ಟು ಹಾಳಾಗಿತ್ತು. ಕನ್ನಡ ಪುಸ್ತಕ ಪ್ರಾಧಿಕಾರ ಕೊಡಮಾಡುವ ವಾರ್ಷಿಕ ಜಿ.ಪಿ.ರಾಜರತ್ನಂ ಪರಿಚಾರಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷ ಡಾ.ನಂದೀಶ್ ಹಂಚೆ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಪ್ರಶಸ್ತಿಗೆ ತೀರ್ಮಾನ ಕೈಗೊಳ್ಳಲಾಗಿದೆ. ಈ ಪ್ರಶಸ್ತಿಯು 1 ಲಕ್ಷ ರೂ. ನಗದು ಒಳಗೊಂಡಿದೆ. ಮೊದಲ ಬಾರಿಗೆ ಅಲ್ಪಸಂಖ್ಯಾತರೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ವಿಶೇಷ.