ಹಸಿರು ಮೈಸೂರು ಅಭಿಯಾನ: ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾಡಳಿತ, ಪಾಲಿಕೆ ಅಧಿಕಾರಿಗಳು
1 min readಮೈಸೂರು: ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ ಇಂದು ಮೈಸೂರು ಜಿಲ್ಲಾಡಳಿತ ಮುಡಾ ಪಾಲಿಕೆಯಿಂದ ಆಯೋಜನೆಗೊಂಡಿದ್ದ ಹಸಿರು ಮೈಸೂರು ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.
ಹಸಿರು ಮೈಸೂರು ಅಭಿಯಾನ ಕಾರ್ಯಕ್ರಮದ ಮೂಲಕ ವರ್ಷ ಪೂರ್ತಿ 25 ಸಾವಿರ ಗಿಡಗಳನ್ನು ನೆಡಲು ಉದ್ದೇಶ ಇಟ್ಟುಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಹಾಗೂ ಪಾಲಿಕೆಯ ಅಧಿಕಾರಿಗಳು ಭಾಗವಹಿಸಿರಲಿಲ್ಲ.
ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯದಲ್ಲಿ ನಂಜನಗೂಡು ರಸ್ತೆಯ ದೇವರಾಯನ ಕೆರೆ ಬಳಿಯ ಹಸಿರು ಮೈಸೂರು ಆವರಣದಲ್ಲಿ ಕಾರ್ಯಕ್ರಮ ಜರುಗಿತು. ಸಂಸದ ಪ್ರತಾಪ್ ಸಿಂಹ, ಶಾಸಕ ಎಸ್.ಎ.ರಾಮದಾಸ್, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಆಯುಕ್ತ ನಟೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.