ಹೃದಯಾಘಾತದಿಂದ ಪೊಲೀಸ್ ಪೇದೆ ಸಾವು!
1 min readಮೈಸೂರು / ಕರ್ತವ್ಯ ಮುಗಿಸಿ ಮನೆಗೆ ತೆರಳುವ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದ ಘಟನೆ ಹುಣಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಿನ್ನೆ ಹಗಲು ಕರ್ತವ್ಯ ಮುಗಿಸಿ ಪೊಲೀಸ್ ವಸತಿ ಗೃಹದಲ್ಲಿ ಕುಸಿದು ಬಿದ್ದ ಶ್ರೀನಿವಾಸ್ ರಕ್ತದ ವಾಂತಿ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನ ಜೊತೆಯಲ್ಲಿದ್ದ ಸ್ನೇಹಿತರೇ ರಾತ್ರಿ 12:30ರ ವೇಳೆ ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಶ್ರೀನಿವಾಸ್ ಅವರು ಕೊನೆಯುಸಿರೆಳೆದಿದ್ದಾರೆ. ಹುಣಸೂರು ಪಟ್ಟಣ ಠಾಣೆಯಲ್ಲಿ ಕಳೆದ 2 ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀನಿವಾಸ್, 1995 ನೇ ಬ್ಯಾಚ್ ಸಿಬ್ಬಂದಿಯಾಗಿದ್ದರು. ಮೂಲತಹ ಮೃತ ಶ್ರೀನಿವಾಸ್ ಮಂಡ್ಯ ಜಿಲ್ಲೆಯ ಪಾಂಡವಪುರದ ನಿವಾಸಿಯಾಗಿದ್ದಾರೆ.