ದುಬಾರಿ ಮಾರಾಟ ಮಾಡುವವರ ವಿರುದ್ಧ ದೂರು ದಾಖಲಿಸಲು ಸಹಾಯವಾಣಿ ಆರಂಭ

1 min read

ಸರ್ಕಾರದ ಆದೇಶದಂತೆ ಕಾನೂನು ಮಾಪನಶಾಸ್ತ್ರ ಇಲಾಖೆಯು ಮೆಡಿಕಲ್ ಅಂಗಡಿಗಳಲ್ಲಿ ಮಾಸ್ಕ್ ಸ್ಯಾನಿಟೈಸರ್ ಮತ್ತು ಆಕ್ಸಿಮೀಟರ್‍ಗಳನ್ನು ನಿಗಧಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವವರ ವಿರುದ್ಧ ದೂರು ದಾಖಲಿಸಲು ಸಹಾಯವಾಣಿ ತೆರೆದಿದೆ.

ಇದಲ್ಲದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯಲ್ಲಿ ತೂಕದಲ್ಲಿ ಕಡಿಮೆ ನೀಡುತ್ತಿರುವವರ, ರೈತರಿಗೆ ಕೃಷಿ ಸಂಬಂಧಪಟ್ಟಂತೆ ಬಿತ್ತನೆಬೀಜ ಕ್ರಿಮಿಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರವನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವವರ, ದಿನಸಿ ಮತ್ತು ಅಗತ್ಯ ಆಹಾರ ಪದಾರ್ಥಗಳು ಪೊಟ್ಟಣ ರೂಪದಲ್ಲಿ ಮಾರಾಟ ಮಾಡುವ ಅಂಗಡಿಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು

ಮೈಸೂರು ವಿಭಾಗದ ಉಪ ನಿಯಂತ್ರಕರು ಕಾನೂನು ಮಾಪನಶಾಸ್ತ್ರ ಇಲಾಖೆ ದೂ. ಸಂ:0821-2479455,

ಸಹಾಯಕ ನಿಯಂತ್ರಕರು ಕಾನೂನು ಮಾಪನಶಾಸ್ತ್ರ ಇಲಾಖೆ ದೂ.ಸಂ:0821-2479107 ಅನ್ನು ಹಾಗೂ

ಇ-ಮೇಲ್ dcmys-Im-ka@nic.in ಮೂಲಕ ಸಂಪರ್ಕಿಸಬಹುದು ಎಂದು ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *