ನಾಯಕತ್ವ ಬದಲಾವಣೆ ವಿಚಾರ: ಹೈಕಮಾಂಡ್ ಇದಕ್ಕೆಲ್ಲಾ ಒಂದು ಅಂಕಿತ ಹಾಕಬೇಕಿದೆ – ಸಚಿವ ವಿ ಸೋಮಣ್ಣ

1 min read

ಮೈಸೂರು: ಯಾರು ದೆಹಲಿಗೆ ಹೋಗಿದ್ದಾರೆ ಹೋಗಿಲ್ಲ ಇದರ ಬಗ್ಗೆ ನನಗೆ ಮಾಹಿತಿ ಇಲ್ಲ ಅಂತ ಸಚಿವ ವಿ ಸೋಮಣ್ಣ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಇಂದು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಸಚಿವ ವಿ ಸೋಮಣ್ಣ ಭೇಟಿ ನೀಡಿ ಸುತ್ತೂರು ಶ್ರೀಗಳ ಜೊತೆ ಪ್ರಸಕ್ತ ವಿದ್ಯಾಮನಗಳ ಬಗ್ಗೆ ಚರ್ಚೆ ನಡೆಸಿದರು. ಈ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ನಾನು ನನ್ನ ಬುದ್ದಿವಂತಿಕೆಯನ್ನು ಕೊರೊನಾ ನಿಯಂತ್ರಣಕ್ಕೆ ಬಳಸುತ್ತಿದ್ದೇನೆ. ಕೆಲವರು ಆ ಬುದ್ದಿವಂತಿಕೆಯನ್ನು ಬೇರೆಯದಕ್ಕೆ ಬಳಸುತ್ತಿದ್ದಾರೆ. ಆ ಪುಣ್ಯಾತ್ಮರನ್ನೇ ಈ ಬಗ್ಗೆ ಕೇಳಿ. ಯಾವ ಕಾರಣಕ್ಕೆ ದೆಹಲಿಗೆ ಹೋಗುತ್ತಿದ್ದಾರೆ ಅಂತ ಹೇಳಿದರು.

ನನ್ನನ್ನು ಸೇರಿದಂತೆ ಪ್ರತಿಯೊಬ್ಬರಿಗೂ ಒಂದೊಂದು ಕಾಯಿಲೆ ಇದೆ. ನನಗೆ ಕೆಲಸ ಮಾಡುವ ಕಾಯಿಲೆ ಅವರಿಗೆ ದೆಹಲಿಗೆ ಹೋಗುವ ಕಾಯಿಲೆ. ಆ ಕಾಯಿಲೆಯ ಮದ್ದು ಗೊತ್ತಿಲ್ಲ. ಇದು ಕೊರೊನಾ ನಿಯಂತ್ರಣ ಮಾಡಬೇಕಾದ ಸಮಯ. ಈ ಸಂದರ್ಭದಲ್ಲಿ ಇಂತಹ ಬೆಳವಣಿಗೆಗಳು ಸರಿಯಲ್ಲ. ಸಿಎಂ ಯಡಿಯೂರಪ್ಪ ಪ್ರತಿ ಜಿಲ್ಲೆ ಜಿಲ್ಲೆ ತಿರುಗುತ್ತಿದ್ದಾರೆ. ಎಲ್ಲವನ್ನೂ ಹೈ ಕಮಾಂಡ್ ಗಮನಿಸುತ್ತಿದೆ. ಹೈಕಮಾಂಡ್ ಇದಕ್ಕೆಲ್ಲಾ ಒಂದು ಅಂಕಿತ ಹಾಕಬೇಕಿದೆ ಅಂತ ಮೈಸೂರಿನಲ್ಲಿ ಸಚಿವ ವಿ‌.ಸೋಮಣ್ಣ ಹೇಳಿದ್ದಾರೆ.

About Author

Leave a Reply

Your email address will not be published. Required fields are marked *